BBMP
Loading ...

HD Devegowda

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್.ಡಿ ದೇವೇಗೌಡ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, ಈ ಹಿನ್ನೆಲೆಯಲ್ಲಿ ಶ್ರೀ ಸ್ಪಟಿಕಪುರಿ ಮಹಾಸಂಸ್ಥಾನ – ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾಗಿರುವ ನಂಜಾವಧೂತ ಸ್ವಾಮೀಜಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾಶಯ ಕೋರಿದ್ದಾರೆ. ಬಿಬಿಎಂಪಿ ನ್ಯೂಸ್​ ವತಿಯಿಂದಲೂ ಶುಭ ಕೋರಲಾಗಿದೆ.

ದೇವೇಗೌಡ ಅವರಿಗೆ ದೇವರು ಇನ್ನಷ್ಟು ಕಾಲ ಆರೋಗ್ಯ ಮತ್ತು ಆಯುಷ್ಯನ್ನು ಕರುಣಿಸಲಿ ಮತ್ತು ರಾಜ್ಯದ ಜನತೆಗೆ ಅವರಿಂದ ಇನ್ನಷ್ಟು ಸೇವೆ ದೊರೆಯಲೆಂದು ನಂಜಾವಧೂತ ಶ್ರೀಗಳು ಶುಭ ಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಾಜಿ ಪ್ರಧಾನಿಗಳು, ಹಿರಿಯ ರಾಜಕೀಯ ನಾಯಕರು ಆಗಿರುವ ಹೆಚ್.ಡಿ.ದೇವೇಗೌಡರಿಗೆ ಜನ್ಮದಿನದ ಶುಭಾಶಯಗಳು. ನಾಡಿನ ಜನರ ಸೇವೆಯನ್ನು ಇನ್ನಷ್ಟು ಕಾಲ ನಡೆಸುವಂತೆ ಭಗವಂತ ನಿಮಗೆ ಆಯುರಾರೋಗ್ಯವನ್ನು ಕರುಣಿಸಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.

ಮಾಜಿ ಪ್ರಧಾನಿ ಶ್ರೀ ಎಚ್.ಡಿ. ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹಾರ್ದಿಕ ಶುಭ ಹಾರೈಕೆಗಳನ್ನು ತಿಳಿಸಿದ್ದಾರೆ. ಸುದೀರ್ಘ ಸಾರ್ವಜನಿಕ ಜೀವನದಲ್ಲಿ ದೇವೇಗೌಡರು ದೇಶಕ್ಕೆ ನೀಡಿರುವ ಕೊಡುಗೆ ಅತ್ಯಂತ ಅಮೂಲ್ಯವಾದದ್ದಾಗಿದೆ; ನೀತಿ ನಿಯಮಗಳು ಹಾಗೂ ಆಡಳಿತಾತ್ಮಕ ವಿಷಯಗಳ ಬಗ್ಗೆ ಹೊಂದಿರುವ ಆಳವಾದ ಜ್ಞಾನ ಮತ್ತು ಸಮಾಜದ ವಂಚಿತ ಹಾಗೂ ಹಿಂದುಳಿದ ವರ್ಗಗಳ ಸೇವೆಗಾಗಿ ಅವರಿಗಿರುವ ಅಪಾರ ಕಾಳಜಿ ಎಲ್ಲರಿಗೂ ಮಾದರಿಯಾಗಿದೆ. ಮುಂಬರುವ ದಿನಗಳಲ್ಲೂ ಅವರು ದೇಶಕ್ಕೆ ಹೀಗೆಯೇ ಮಾರ್ಗದರ್ಶನ ನೀಡುವಂತಾಗಲಿ ಹಾಗೂ ಭಗವಂತನು ಅವರಿಗೆ ಸುದೀರ್ಘ ಆಯುಷ್ಯ ಮತ್ತು ಉತ್ತಮ ಆರೋಗ್ಯವನ್ನು ಕರುಣಿಸಲಿ ಎಂದು ಹಾರೈಸಿದ್ದಾರೆ.

Leave a Reply

Your email address will not be published. Required fields are marked *