BBMP
Loading ...

Rain

ಬೆಂಗಳೂರು:- ಕರ್ನಾಟಕದಲ್ಲಿ ಇನ್ನೂ 2 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಫೆಂಗಲ್ ಚಂಡಮಾರುತದ ಎಫೆಕ್ಟ್ ಇನ್ನಷ್ಟು ಹೆಚ್ಚಾಗಲಿದೆ. ಬಂಗಾಳ ಕೊಲ್ಲಿಯಿಂದ ಅರಬ್ಬಿ ಸಮುದ್ರದತ್ತ ಚಂಡಮಾರುತ ಪಥ ಬದಲಿಸಿದ್ದು ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ.

ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಆಂತರಿಕ ಕರ್ನಾಟಕದ ಕೆಲವು ಭಾಗಗಳಲ್ಲಿ ಇಂದು ಬಾರಿ ಮಳೆಯಾಗಲಿದ್ದು ಮಂಗಳವಾರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೆ, ಈ ಪ್ರದೇಶಗಳಲ್ಲಿ ಬುಧವಾರದಿಂದ ಮಳೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ಮತ್ತು ಹಾಸನ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳಿಗೆ ಸೋಮವಾರ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ, ಬೆಂಗಳೂರು ನಿರ್ದೇಶಕ ಸಿಎಸ್ ಪಾಟೀಲ್ ತಿಳಿಸಿದ್ದಾರೆ. ಫೆಂಗಲ್ ಪ್ರಭಾವದಿಂದ ಬೆಂಗಳೂರು ಮತ್ತು ಕರ್ನಾಟಕದ ಇತರ ಭಾಗಗಳಲ್ಲಿ ಭಾನುವಾರದಿಂದ ವ್ಯಾಪಕ ಮಳೆಯಾಗಿದೆ ಎಂದು ಅವರು ಹೇಳಿದರು.

ಉಡುಪಿ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದ್ದು ಆರೆಂಜ್ ಅಲರ್ಟ್ ಘೋಷಿಸಿದೆ. ಆರೆಂಜ್ ಅಲರ್ಟ್ ಎಂದರೆ 11 ಸೆಂ.ಮೀ ನಿಂದ 20 ಸೆಂ.ಮೀ ವರೆಗಿನ ಭಾರೀ ಮಳೆ ಮತ್ತು ಹಳದಿ ಎಚ್ಚರಿಕೆ ಎಂದರೆ 6 ಸೆಂ.ಮೀ ಮತ್ತು 11 ಸೆಂ.ಮೀ ವರೆಗೆ ಮಳೆಯಾಗುತ್ತದೆ.

Leave a Reply

Your email address will not be published. Required fields are marked *