BBMP
Loading ...

ಬೆಂಗಳೂರು : ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಚಿತ್ರದುರ್ಗ, ತುಮಕೂರು, ಹಾವೇರಿ, ಬಳ್ಳಾರಿ, ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ನೀಡಿದೆ.

ಮುಂಗಾರು ದುರ್ಬಲಗೊಂಡಿದ್ದು, ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ಬಂಗಾಳಕೊಲ್ಲಿಯ ಕಡೆಯಿಂದ ಗಾಳಿ ಸೆಳೆಯಲ್ಪಡುವ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡು ಭಾಗಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಈಗಾಗಲೇ ಮುಂಜಾನೆ ಮಳೆಯಾಗಿದ್ದು, ಇವತ್ತು ತಡರಾತ್ರಿ ಅಥವಾ ನಾಳೆ ಮುಂಜಾನೆ ಹೆಚ್ಚಿನ ಭಾಗಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ ಇದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು, ಹಾವೇರಿ, ಬಳ್ಳಾರಿ, ಧಾರವಾಡ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ದಾವಣಗೆರೆ, ವಿಜಯನಗರ, ರಾಯಚೂರು, ಕೊಪ್ಪಳ, ಕಲಬುರಗಿ ಹಾಗೂ ಬೀದರ್​ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ.

ಮಾಜಿ ಸಚಿವ ಕೆ. ಸುಧಾಕರ್‌ ಹೆಸರು ಬರೆದಿಟ್ಟು ಕಾರು ಚಾಲಕ ಆತ್ಮಹತ್ಯೆ

Leave a Reply

Your email address will not be published. Required fields are marked *