BBMP
Loading ...

ಬೆಂಗಳೂರು: ರಾಜ್ಯದಲ್ಲಿ ಮುಂದಿನ 6 ದಿನಗಳ ಕಾಲ ಭಾರೀ ಮಳೆಯಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಿ ಎಚ್ಚರಿಕೆ ನೀಡಲಾಗಿದೆ. ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದ್ರೆ, ಇತ್ತ ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ನೀಡಲಾಗಿದೆ.

ರೆಡ್ ಅಲರ್ಟ್: ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಆರೆಂಜ್ ಅಲರ್ಟ್: ಹಾಸನ, ಕೊಡಗು, ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಯಲ್ಲೋ ಅಲರ್ಟ್: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯಪುರ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ ಘೋಷಣೆ ಮಾಡಲಾಗಿದೆ.

ಕಿರುತೆರೆಯ ಖ್ಯಾತ ನಟ ಶ್ರೀಧರ್‌ ನಾಯಕ್‌ ವಿಧಿವಶ!

Leave a Reply

Your email address will not be published. Required fields are marked *