BBMP
Loading ...

BNG Rain

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಏರಿಯಾ ಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

ಇನ್ನೂ ಈಗಾಗಲೇ ವೈಟ್ ಫೀಲ್ಡ್, ಜಯನಗರ, ಕೆಂಗೇರಿ ಸೇರಿದಂತೆ ಹಲವೆಡೆ ಮಳೆ ಸುರಿದಿದ್ದು, ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿದೆ. ಮಲ್ಲೇಶ್ವರಂ, ಶಾಂತಿನಗರ, ರಾಜಾಜಿನಗರ, ಬನಶಂಕರಿ, ಜಯನಗರ ಮತ್ತು ಕೆಲವು ಭಾಗಗಳಲ್ಲಿ ಮಳೆಯಾಗಿದೆ. ವೈಟ್ ಫೀಲ್ಡ್, ವರ್ತೂರು ಭಾಗದಲ್ಲಿ ಜೋರು ಮಳೆಯಾಗಿದೆ. ಭಾರೀ ಮಳೆಯ ಪರಿಣಾಮ ವರ್ತೂರು ರಸ್ತೆ ಕೆರೆಯಂತಾಗಿದೆ. ಬೆಂಗಳೂರು ಸೇರಿದಂತೆ ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಹಾವೇರಿ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏ.19ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Leave a Reply

Your email address will not be published. Required fields are marked *