Greatger Bengaluru News9 : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಐತಿಹಾಸಿಕ ಸಮಾರಂಭಕ್ಕೆ ರಾಜಧಾನಿ ಬೆಂಗಳೂರು ಸಜ್ಜಾಗುತ್ತಿದ್ದು, ಇಡೀ ದೇಶದ ಗಮನ ಸೆಳೆಯುವಂತಹ ವಿವಿಐಪಿ (VVIP) ಹಾಗೂ ಜನಸಾಮಾನ್ಯರನ್ನೊಳಗೊಂಡ ಆಹ್ವಾನಿತರ ಭವ್ಯ ಪಟ್ಟಿ ಸಿದ್ಧವಾಗಿದೆ. ರಾಜಕೀಯ ದೈತ್ಯರ ಜೊತೆಗೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಸಮಾರಂಭದಲ್ಲಿ ಭಾಗವಹಿಸಲು ವಿಶೇಷ ಆಹ್ವಾನ ನೀಡಿರುವುದು ಈ ಕಾರ್ಯಕ್ರಮದ ವಿಶೇಷವಾಗಿದೆ.
ಈ ಸಮಾರಂಭಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್‌ನ ಪ್ರಮುಖ ನಾಯಕರು ಸಾಕ್ಷಿಯಾಗಲಿದ್ದಾರೆ. ಇವರೊಂದಿಗೆ ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ವಿವಿಧ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳು (PCC Presidents) ಮತ್ತು ಪ್ರಮುಖ ಸಂಸದರು ಪಾಲ್ಗೊಳ್ಳಲಿದ್ದಾರೆ. ಸಮಾರಂಭಕ್ಕೆ ಮಂಗಳಕರ ಚಾಲನೆ ನೀಡಲು ಸರ್ವಧರ್ಮ ಗುರುಗಳನ್ನು ಆಹ್ವಾನಿಸಲಾಗಿದೆ.
ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನಿತರು
- ಮಲ್ಲಿಕಾರ್ಜುನ ಖರ್ಗೆ
- ರಾಹುಲ್ ಗಾಂಧಿ
- ವೇಣುಗೋಪಾಲ್
- ಸುರ್ಜೆವಾಲ
- ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು
- ಉಪಮುಖ್ಯಮಂತ್ರಿಗಳು
- ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳು,
- ಸಂಸದರು
- ಸರ್ವಧರ್ಮ ಗುರುಗಳು
- ಕನಕಪುರ ದೊಡ್ಡಾಲಹಳ್ಳಿ ಸರಕಾರಿ ಶಾಲೆ ವಿದ್ಯಾರ್ಥಿಗಳು
- ಕೂಲಿ ಕಾರ್ಮಿಕರು
- ಪೌರ ಕಾರ್ಮಿಕರು
- ರೈತ ಮುಖಂಡರು
- ದಲಿತ ಸಂಘಟನೆ ಮುಖಂಡರು
- ಹಿಂದುಳಿದ ವರ್ಗಗಳ ಮುಖಂಡರು
- ಸ್ತ್ರೀ ಶಕ್ತಿ ಸಂಘಗಳ ಪ್ರತಿನಿಧಿಗಳು
- ಮಹಿಳಾ ಮುಖಂಡರು
- ಮಾಧ್ಯಮ ಕ್ಷೇತ್ರದ
- ಸಿನಿಮಾರಂಗ
- ನ್ಯಾಯಾಂಗ
- ಕ್ರೀಡಾಕ್ಷೇತ್ರ
- ನಾಟಕ ರಂಗ
- ಸಾಹಿತಿಗಳು
- ಕಲಾವಿದರು
- ಕೈಗರಿಕೋದ್ಯಮಿಗಳು
- ವಾಣಿಜ್ಯೋದ್ಯಮಿಗಳು
- ಹೋಟೆಲ್ ಉದ್ಯಮಿಗಳು
- ಯುವ ಮುಖಂಡರು


