BBMP
Loading ...

Greater Bengaluru News9:- ಕಾಮಾಕ್ಷಿಪಾಳ್ಯ ಸಂಚಾರ ಠಾಣಾ ವ್ಯಾಪ್ತಿಯ ಹೌಸಿಂಗ್ ಬೋರ್ಡ್ ಬಳಿ ಸುಜುಕಿ ಗಿಕ್ಸಿ ಹಾಗೂ ಪಲ್ಸರ್ 150 ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ.

ಈ ಅಪಘಾತದಲ್ಲಿ ಸುಜುಕಿ ಗಿಕ್ಸಿ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಹಿಳಾ ಸವಾರ ಕವಿತಾ (31) ಅವರಿಗೆ ತಲೆಗೆ ಗಂಭೀರ ಗಾಯಗಳಾಗಿವೆ. ಅವರು ಹೆಲ್ಮೆಟ್ ಧರಿಸದೆ ಬೈಕ್ ಓಡಿಸುತ್ತಿದ್ದರೆಂದು ತಿಳಿದುಬಂದಿದೆ.

ಡಿಕ್ಕಿಯ ಪರಿಣಾಮವಾಗಿ ಇಬ್ಬರು ಸವಾರರೂ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಬಗ್ಗೆ ಮುಂದಿನ ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *