Greater Bengaluru News9 : ಕಾರ್ ಮಿರರ್ ಗೆ ಟಚ್ ಆಗಿದ್ದಕ್ಕೆ ಹಿಂಬಾಲಿಸಿ ಕೊಂಡು ಬಂದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಪುಟ್ಟೇನಹಳ್ಳಿ ಪೊಲೀಸರ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ದರ್ಶನ್ ಮೃತ ವ್ಯಕ್ತಿಯಾಗಿದ್ದು, ವರೂಣ್ ಗಾಯಾಳು ಆಗಿದ್ದಾನೆ. ದರ್ಶನ್ ಮತ್ತು ವರುಣ್ ಇಬ್ಬರೂ ಬೈಕ್ನಲ್ಲಿ ಹೋಗುತ್ತಿದ್ದು, ಬೈಕ್ ಮುಂದೆ ಹೋಗುತ್ತಿದ್ದ ಕಾರಿನ ಮಿರರ್‌ಗೆ ಹೊಡೆದಿತ್ತು.
ಈ ವೇಳೆ ಮಿರರ್ ನ ಗಾಜು ಒಡೆದಿದ್ದು, ಕಾರಿನಲ್ಲಿದ್ದ ಮನೋಜ್ ಕುಮಾರ್ ಮತ್ತು ಆರತಿ ಶರ್ಮ ದಂಪತಿ ಇದರಿಂದ ಕೋಪಗೊಂಡು, ಸುಮಾರು ಎರಡು ಕಿಲೋಮೀಟರ್‌ಗಳಷ್ಟು ಹಿಂಬಾಲಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ತನಿಖೆಯಲ್ಲಿ ಪತ್ತೆಯಾಗಿದೆ.
ಡಿಕ್ಕಿ ಹೊಡೆದ ರಭಸಕ್ಕೆ ದರ್ಶನ್ ಮತ್ತು ವರುಣ್ ಇಬ್ಬರೂ ರಸ್ತೆಗುರುಳಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ದರ್ಶನ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಪ್ರಾಥಮಿಕವಾಗಿ ಅಪಘಾತ ಎಂದು ಜೆಪಿ ನಗರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿದ್ದರು.
ಮೊದಲು ಇಬ್ಬರಿಗೂ ಡಿಕ್ಕಿ ಹೊಡೆದ ನಂತರ ತಪ್ಪಿಸಿಕೊಂಡ ದಂಪತಿ, ಮತ್ತೆ ಯೂ ಟರ್ನ್ ತೆಗೆದುಕೊಂಡು ಬಂದು ಮತ್ತೊಮ್ಮೆ ಡಿಕ್ಕಿ ಹೊಡೆದು ಕೊಲೆ ಮಾಡಿದ್ದಾರೆ. ನಂತರ ಸ್ಥಳದಿಂದ ಪಲಾಯನ ಮಾಡಿ, ಕೆಲ ಸಮಯದ ಬಳಿಕ ಮುಖಕ್ಕೆ ಮಾಸ್ಕ್ ಹಾಕಿಕೊಂಡು ಸ್ಥಳಕ್ಕೆ ಮರಳಿ ಕಾರಿನ ಬಿಡಿ ಭಾಗಗಳನ್ನು ತೆಗೆದುಕೊಂಡು ಎಸ್ಕೇಪ್ ಆಗಿದ್ದಾರೆ ಎಂದು ಪೊಲೀಸ್ ತನಿಖೆಯ ವೇಳೆ ತಿಳಿದುಬಂದಿದೆ.


