BBMP
Loading ...

Bribe

Greater Bengaluru News9 : ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಅವರ ಆಪ್ತಸಹಾಯಕ ಶಿವಕುಮಾರ್‌ ಸೋಮವಾರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ದೂರು ಆಧರಿಸಿ ಈ ಕಾರ್ಯಾಚರಣೆ ನಡೆದಿದೆ.

ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಒಂದು ವರ್ಷದಿಂದ ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 20 ಗುಂಟೆ ಭೂಮಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತಿತ್ತು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಿವಾಸಿ ಡಾ.ರೂಪಾ ಅವರ ಬಳಿ ಉಪವಿಭಾಗಧಿಕಾರಿ ರೂ. 10.50 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಮೊದಲ ಕಂತಾಗಿ ರೂ. 5 ಲಕ್ಷ ತೆಗೆದುಕೊಂಡಿದ್ದರು.

2ನೇ ಕಂತು ರೂ. 5.50 ಲಕ್ಷವನ್ನು ಕೊಡುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಉಪವಿಭಾಗಾಧಿಕಾರಿಯು ಹಣವನ್ನು ಮನೆಯಲ್ಲಿ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ. ಕಾವ್ಯಾರಾಣಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಡಿವೈಎಸ್‌ಪಿ ಶೈಲೇಂದ್ರ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.

ದಾಳಿಯಲ್ಲಿ ತನಿಖಾಧಿಕಾರಿ ರವಿಕುಮಾರ್, ಮಡಿಕೇರಿ ಡಿವೈಎಸ್‌ಪಿ ದಿನಕರಶೆಟ್ಟಿ, ಇನ್‌ಸ್ಪೆಕ್ಟರ್‌ ವೀಣಾ ನಾಯಕ್ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *