BBMP
Loading ...

Siddaramaiah

ಬೆಂಗಳೂರು : ಪಾಕಿಸ್ತಾನದ ಜೊತೆಗೆ ಯುದ್ಧ ಬೇಡ ಅಂತ ನಾನು ಹೇಳಿಲ್ಲ. ಅನಿವಾರ್ಯ ಆದ್ರೆ ಮಾಡಬೇಕು. ಯುದ್ಧದಿಂದಲೇ ಪರಿಹಾರ ಅಲ್ಲ, ಯುದ್ಧವೇ ಬೇಡವೇ ಬೇಡ ಎಂದು ನಾನು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯುದ್ಧ ಅನಿವಾರ್ಯವಾದರೆ ಮಾತ್ರ ಯುದ್ಧ ಮಾಡಬೇಕು, ಯುದ್ಧದಿಂದಲೇ ಪರಿಹಾರ ಅಲ್ಲ, ಯುದ್ಧವೇ ಬೇಡವೇ ಬೇಡ ಎಂದು ನಾನು ಹೇಳಿಲ್ಲ. ಯುದ್ಧವೇ ಪರಿಹಾರವಲ್ಲ, ಕೇಂದ್ರ ಸರ್ಕಾರ ಭದ್ರತೆ ಕೊಡಬೇಕು ಅಲ್ಲವೇ? ಹಿಂದೆ 40 ಸೈನಿಕರು ಮೃತಪಟ್ಟಿದ್ದರು. ಈಗ 27 ಜನ ಸಾವನ್ನಪ್ಪಿದ್ದಾರೆ. ಯುದ್ಧ ಅನಿವಾರ್ಯವಾದರೆ ಮಾತ್ರ ಮಾಡಬೇಕು. ತಕ್ಷಣಕ್ಕೆ ಯುದ್ಧ ಬೇಡ ಎಂದು ಹೇಳಿದ್ದೇನೆ ಎಂದರು.

ಜಮ್ಮು-ಕಾಶ್ಮೀರದ ಪಹಲ್ಲಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಕನ್ನಡಿಗರು ಸೇರಿದಂತೆ 26 ಪ್ರವಾಸಿಗರು ಬಲಿಯಾಗಿದ್ದು, ಈ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಯೊಂದು ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪಾಕಿಸ್ತಾನ ಮಾಧ್ಯಮಗಳಲ್ಲಿಯೂ ಸಿದ್ದರಾಮಯ್ಯ ಸುದ್ದಿಯಾಗಿದ್ದರು. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಅನಿವಾರ್ಯವಲ್ಲ ಎಂದು ಹೇಳಿಕೆ ನೀಡಿದ್ದು, ಇದೀಗ ಈ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ.

ಪಾಕಿಸ್ತಾನಕ್ಕೆ ನೀರು ನಿಲ್ಲಿಸೋದು ಸುಲಭನಾ?, ಸಿಂಧೂ ತಡೆಯೋ ಸಾಮಾರ್ಥ್ಯ ಭಾರತಕ್ಕಿದೀಯಾ? – ತಜ್ಞರು ಹೇಳುವುದೇನು?

Leave a Reply

Your email address will not be published. Required fields are marked *