BBMP
Loading ...

Bribe

ಬೆಂಗಳೂರು: ವಾಣಿಜ್ಯ ತೆರಿಗೆ ಅಧಿಕಾರಿ ಅಥವಾ ಸಿಬ್ಬಂದಿ ಯುಪಿಐಗೆ (UPI) ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಲ್ಲಿ ತಕ್ಷಣ ಇಲಾಖೆಯ ಸಹಾಯವಾಣಿ ಸಂಖ್ಯೆಗೆ ಸಂಪರ್ಕಿಸಿ ಎಂದು ಕರ್ನಾಟಕ ವಾಣಿಜ್ಯ ತೆರಿಗೆ ಇಲಾಖೆ ಮಾಧ್ಯಮ ಪ್ರಕಟಣೆ ಹೊರಡಿಸಿದೆ.

ದೃಶ್ಯ ಮಾಧ್ಯಮಗಳಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿ /ಸಿಬ್ಬಂದಿಯವರು ಯು.ಪಿ.ಐ.ಗೆ ಸಂಬಂಧಿಸಿದ ವಿಚಾರದಲ್ಲಿ ಲಂಚಕ್ಕಾಗಿ ಬೇಡಿಕೆ ಇಟ್ಟಿರುತ್ತಾರೆಂದು ಪ್ರಸಾರವಾಗಿದೆ. ಕೆಲವು ಮಧ್ಯವರ್ತಿಗಳು ವರ್ತಕರಿಗೆ ಸಹಾಯ ಮಾಡುವ ನೆಪದಲ್ಲಿ ಹಣಕ್ಕೆ ಬೇಡಿಕೆ ಇಡುತ್ತಿರುವುದು ಕೂಡ ಇಲಾಖೆಯ ಗಮನಕ್ಕೆ ಬಂದಿದೆ.

ಇಲಾಖೆಯು ಇಂತಹ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ತ ಅಧಿಕಾರಿ ಅಥವಾ ಸಿಬ್ಬಂದಿ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳವುದಕ್ಕೆ ವಾಣಿಜ್ಯ ತೆರಿಗೆ ಇಲಾಖೆ ಬದ್ಧವಾಗಿರುತ್ತದೆ. ವ್ಯಾಪಾರಸ್ಥರು ಇಂತಹ ಪ್ರಕರಣಗಳನ್ನು ತಕ್ಷಣ ವಾಣಿಜ್ಯ ತೆರಿಗೆ ಇಲಾಖೆಯ ಗಮನಕ್ಕೆ ತರಲು ಸಹಾಯವಾಣಿ ದೂರವಾಣಿ ಸಂಖ್ಯೆ: 1800 425 6300 (ಸಮಯ ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆಯವರೆಗೆ ರಜಾ ದಿನಗಳನ್ನು ಹೊರತುಪಡಿಸಿ) ಸಂಪರ್ಕಿಸುವಂತೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಕೇಂದ್ರ ಕಚೇರಿ-1ರ ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೀಘ್ರದಲ್ಲೇ ಮೆಟ್ರೋ ಹಳದಿ ಮಾರ್ಗ ಸಂಚಾರ ಶುರು: ಜುಲೈ 22 ರಿಂದ 25 ರವರೆಗೆ ಸುರಕ್ಷತಾ ಪರಿಶೀಲನೆ

Leave a Reply

Your email address will not be published. Required fields are marked *