BBMP
Loading ...

OC and CC

ಮಹಾನಗರ, ನಗರ, ಪಟ್ಟಣಗಳಲ್ಲಿ ಮನೆ, ಕಟ್ಟಡ ನಿರ್ವಣಕ್ಕೆ ಆರಂಭಿಕ ಪ್ರಮಾಣ ಪತ್ರ (ಸಿಸಿ) ಹಾಗೂ ವಾಸ ಯೋಗ್ಯ ಪ್ರಮಾಣ ಪತ್ರ (ಒಸಿ) ಕಡ್ಡಾಯ ಮಾಡಿದ್ದ ರಾಜ್ಯ ಸರ್ಕಾರ ಈ ನಿಯಮವನ್ನು ಇದೀಗ ಹಳ್ಳಿಗಳಿಗೂ ವಿಸ್ತರಿಸಿದೆ. ಸಿಸಿ, ಒಸಿ ಇಲ್ಲದಿದ್ದರೆ ನೀರು, ವಿದ್ಯುತ್, ಒಳಚರಂಡಿ ಸಂಪರ್ಕ ಸೇರಿ ಅಗತ್ಯ ಸೇವಾ ಸಂಪರ್ಕಗಳು ಸಿಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸುಪ್ರೀಂ ಕೋರ್ಟ್ ಆದೇಶದಂತೆ ಮಾರ್ಗಸೂಚಿ ಹೊರಡಿಸಿದೆ.

ಅನಧಿಕೃತ ಕಟ್ಟಡ ನಿರ್ವಣ, ವಿನ್ಯಾಸ ಉಲ್ಲಂಘಿಸಿ ನಡೆಯುವ ಕಾಮಗಾರಿ ತಡೆಗಟ್ಟಲು ಹಾಗೂ ಸರ್ಕಾರದ, ಸಾರ್ವಜನಿಕ ಸ್ವತ್ತಿನಲ್ಲಿ ನಿರ್ವಿುಸುತ್ತಿರುವ ಅಕ್ರಮ ಕಟ್ಟಡಗಳನ್ನು ನೆಲಸಮ ಮಾಡುವ ಸಂಬಂಧ ಸುಪ್ರೀಂ ಕೋರ್ಟ್ ಆದೇಶಿಸಿ ಮಾರ್ಗಸೂಚಿ ಹೊರಡಿಸಿದೆ. ಇದರ ಅನ್ವಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೋರ್ಟ್ ಆದೇಶ ಪಾಲಿಸುವಂತೆ ಸುತ್ತೋಲೆ ಹೊರಡಿಸಿದ್ದಾರೆ. ಗ್ರಾಮ ಸ್ವರಾಜ್ ಮತ್ತು ಪಂಚಾಯತ್​ರಾಜ್ ಅಧಿನಿಯಮ 1993ರಲ್ಲಿ ಕಟ್ಟಡ ನಿರ್ಮಾಣ ಮತ್ತು ನಿಯಂತ್ರಣದ ಬಗ್ಗೆ ಉಲ್ಲೇಖಿಸಲಾಗಿದೆ. ಗ್ರಾಮಠಾಣಾ ವ್ಯಾಪ್ತಿಯನ್ನು ಹೊರತುಪಡಿಸಿ ಹೊಸದಾಗಿ ಅಭಿವೃದ್ಧಿಪಡಿಸಿರುವ ಲೇಔಟ್​ಗಳಲ್ಲಿ ಕಟ್ಟಡ ನಿರ್ವಿುಸಲು ಪರವಾನಗಿ ನೀಡುವ ಮುನ್ನ ಕಟ್ಟಡ ಕಟ್ಟುವ ಸೈಟ್ ಕ್ರಮಬದ್ಧವಾಗಿ ಇದೆಯೇ. ಪಟ್ಟಣ ಮತ್ತು ಗ್ರಾಮಾಂತರ ಯೋಜನೆ ನಿಯಮಗಳ ಅನುಸಾರ ಲೇಔಟ್ ಅಭಿವೃದ್ಧಿಪಡಿಸಲಾಗಿದೆಯೇ, ಕಟ್ಟಡ ಯೋಜನೆ ಮತ್ತು ಅನುಮೋದಿತ ನಕ್ಷೆಯಂತೆ ಕಟ್ಟಡ ನಿರ್ಮಾಣ ಆಗುತ್ತಿದೆಯೇ ಎಂದು ಗ್ರಾಪಂ ಅಧಿಕಾರಿ ಮತ್ತು ಸ್ಥಳೀಯ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಬೇಕು. ನಂತರ ವಾಸ ಯೋಗ್ಯ ಪ್ರಮಾಣ ಪತ್ರ ವಿತರಿಸಬೇಕು.

ವಿನ್ಯಾಸ ಉಲ್ಲಂಘಿಸಿದ್ದರೆ ವಸತಿ, ವಾಣಿಜ್ಯ ಮತ್ತು ಇತರ ಕಟ್ಟಡಗಳ ಕಾಮಗಾರಿ ತಡೆದು ಸರಿಪಡಿಸಿಕೊಳ್ಳುವಂತೆ ನೋಟಿಸ್ ಜಾರಿ ಮಾಡಬೇಕು. ಕಟ್ಟಡ ನಿರ್ಮಾಣ ಪೂರ್ಣಗೊಂಡ ಮೇಲೆ ಮಾಲೀಕರು ಗ್ರಾಪಂಗೆ ಮನವಿ ಪತ್ರ ಸಲ್ಲಿಸಿದ ನಂತರ ಪಿಡಿಒ ಮತ್ತು ಸ್ಥಳೀಯ ಯೋಜನಾ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಬೇಕು. ನಿಯಮ ಪಾಲನೆ ಮಾಡಿದ್ದರೆ ಮಾಲೀಕ ಅಥವಾ ವಾರಸುದಾರರಿಂದ ಲಿಖಿತ ಮುಚ್ಚಳಿಕೆ ಪಡೆದು ಸಿಸಿ, ಒಸಿ ನೀಡಬೇಕು. ತಪ್ಪಿದರೆ ಕಟ್ಟಡ ಮಾಲೀಕ, ವಾಸ್ತುಶಿಲ್ಪಿ, ಇಂಜಿನಿಯರ್, ಮೇಲ್ವಿಚಾರಕರ ವಿರುದ್ಧ ಕಾನೂನುಕ್ರಮ ಕೈಗೊಳ್ಳಬೇಕೆಂದು ಸರ್ಕಾರ ಸೂಚಿಸಿದೆ.

ಇವುಗಳಿಗಿಲ್ಲ ಪರವಾನಗಿ!: ಅಕ್ರಮವಾಗಿ ನಿರ್ವಿುಸಿರುವ ಕಟ್ಟಡಗಳಲ್ಲಿ ವ್ಯಾಪಾರ, ವಾಣಿಜ್ಯ ವಹಿವಾಟು ನಡೆಸಲು ಅನುಮತಿ, ಲೈಸೆನ್ಸ್ ನೀಡಬಾರದು. ಬ್ಯಾಂಕ್, ಹಣಕಾಸು ಸಂಸ್ಥೆಗಳು ಸಾಲ, ಹಣಕಾಸಿನ ನೆರವು ಮಂಜೂರು ಮಾಡುವ ಮುನ್ನ ಕಟ್ಟಡದ ಸಿಸಿ ಮತ್ತು ಒಸಿ ಪರಿಶೀಲನೆ ನಡೆಸಬೇಕು.

ಅನಧಿಕೃತ ಕಟ್ಟಡ ನೆಲಸಮಕ್ಕೆ ಕಟ್ಟಾಜ್ಞೆ

ಗ್ರಾಪಂ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಮತ್ತು ನಿಯಮ ಉಲ್ಲಂಘಿಸಿ ನಿರ್ವಿುಸುತ್ತಿರುವ ಕಟ್ಟಡಗಳನ್ನು ತಡೆಯಬೇಕು. ಸರ್ಕಾರದ, ಸಾರ್ವಜನಿಕ ಸ್ವತ್ತಿನಲ್ಲಿ ಮತ್ತು ಕೆರೆ, ಕುಂಟೆ, ಕಾಲುವೆ ಮತ್ತಿತರ ಸಾರ್ವಜನಿಕ ಹಿತಾಸಕ್ತಿಯುಳ್ಳ ಜಾಗದಲ್ಲಿ ಕಟ್ಟಡಗಳ ನಿರ್ವಣವಾಗಿದ್ದರೆ ಸುಪ್ರೀಂ ಕೋರ್ಟ್ ಆದೇಶ, ಮಾರ್ಗಸೂಚಿಯಂತೆ ನೆಲಸಮ ಗೊಳಿಸಬೇಕು. ಗ್ರಾಮ ಪಂಚಾಯಿತಿ ನಿಯಮಾನುಸಾರ ಸ್ಥಳೀಯ ಕಂದಾಯ ಇಲಾಖೆ, ಪೊಲೀಸ್ ಸಹಕಾರ ನೀಡಬೇಕು ಎಂದು ಸರ್ಕಾರ ಕಟ್ಟಾಜ್ಞೆ ಹೊರಡಿಸಿದೆ.

ವಿದ್ಯುತ್, ನೀರಿನ ಸಂಪರ್ಕ ಬೇಕಾದ್ರೆ ಇನ್ಮುಂದೆ ಮನೆ ಕಟ್ಟುವ ಮುಂಚೆ ಪ್ಲಾನ್, NOC ಕಡ್ಡಾಯ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶ

Leave a Reply

Your email address will not be published. Required fields are marked *