BBMP
Loading ...

cow

ಬೆಂಗಳೂರು: ಛೇ.. ಇದೆಂಥಾ ವಿಕೃತಿ. ಅಸಲಿ ದೃಶ್ಯವನ್ನ ನಾವು ತೋರಿಸೋಕೆ ಆಗಲ್ಲ. ಯಾಕಂದ್ರೆ ಅಂತಹ ಕ್ರೂರ ದೃಶ್ಯ ನೋಡಿದ್ರೆ ಎಂತಹವರ ಕರುಳು ಚುರ್ ಅನ್ನುತ್ತೆ. ಬೆಂಗಳೂರಲ್ಲಿ ಕಿಡಿಗೇಡಿಗಳು ಮೂಖ ಪ್ರಾಣಿಗಳ ಮೇಲೆ ಅಮಾನವೀಯ ಕೃತ್ಯ ಎಸಗಿದ್ದಾರೆ. ಹಾಲು ಕೊಡುವ ಕಾಮಧೇನುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆಯಲಾಗಿದೆ.

ಚಾಮರಾಜಪೇಟೆ ವಿನಾಯಕ ನಗರದ ಪೆನ್ಷನ್ ಮೊಲಾದಲ್ಲಿ ಇಂತಹದೊಂದು ಕ್ರೂರ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಮಧ್ಯರಾತ್ರಿಯೇ ಕಿಡಿಗೇಡಿಗಳು ಹಸುವಿನ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಇಂದು ನಸುಕಿನ ಜಾವ ಹಸುವಿನ ಮಾಲೀಕರಿಗೆ ಪಕ್ಕದ ಮನೆಯವರು ಮಾಹಿತಿ ನೀಡಿದ್ದಾರೆ. ನೀಚರ ಕೃತ್ಯಕ್ಕೆ ಮೂರು ಹಸುಗಳ ಮೂಕ ರೋಧನೆ ಮುಗಿಲು ಮುಟ್ಟಿದೆ.

3 ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರೋ ರಾಕ್ಷಸ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ವಿನಾಯಕ ನಗರದಲ್ಲಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣ ಆಗಿತ್ತು. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಬಿಜೆಪಿ ಸಂಸದ ಪಿ.ಸಿ ಮೋಹನ್ ಅವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಸುವಿನ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ. ಗೋ ಮಾತೆಯನ್ನ ಪೂಜೆ ಮಾಡುವ ಭಾರತದಲ್ಲಿ ಇದೆ‌ಂತಾ ಕೃತ್ಯ. ಕಿಡಿಗೇಡಿಗಳಿಗೆ ಶಿಕ್ಷೆಯಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಬಿಜೆಪಿ ನಾಯಕರು ಎಚ್ಚರಿಸಿದ್ದಾರೆ.

ಅಸಲಿ ಕಾರಣವೇನು?
ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದಿರುವ ಈ ಘಟನೆ ದನದ ಆಸ್ಪತ್ರೆ ಇರುವ ಹಿಂಭಾಗದಲ್ಲೇ ನಡೆದಿದೆ. ಕಳೆದ ಆರು ತಿಂಗಳ ಹಿಂದೆ ಚಾಮರಾಜಪೇಟೆ ಪಶು ಆಸ್ಪತ್ರೆಯ ಎತ್ತಂಗಡಿಗೆ ಪ್ಲ್ಯಾನ್ ಮಾಡಲಾಗಿತ್ತಂತೆ. ಈ ವೇಳೆ ಇದೇ ಹಸುಗಳನ್ನ ಮಾಲೀಕರು ಪಶು ಆಸ್ಪತ್ರೆಗೆ ತೆಗೆದುಕೊಂಡು ಹೋಗಿದ್ದರು. ಹೀಗಾಗಿ ದುಷ್ಮನ್‌ಗಳು ಈ ಕೃತ್ಯ ಎಸಗಿರಬಹುದೆಂದು ಮಾಲೀಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಸ್ಯಾಂಡಲ್​​ವುಡ್ ಖ್ಯಾತ ಹಾಸ್ಯನಟ ಸರಿಗಮ ವಿಜಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

Leave a Reply

Your email address will not be published. Required fields are marked *