BBMP
Loading ...

Siddaramaiah

ಬೆಳಗಾವಿ: ಕಾಂಗ್ರೆಸ್ ಸಮಾವೇಶದಲ್ಲಿ ಪೊಲೀಸ್‌ ಅಧಿಕಾರಿ ಯೊಬ್ಬರ ಮೇಲೆ ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಬೆಳಗಾವಿಯ ಕ್ಯಾಂಪ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಆರ್.ಟಿ.ಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.

ಕೇಂದ್ರದ ಬೆಲೆ ಏರಿಕೆ ನೀತಿ ವಿರೋಧಿಸಿ ಏಪ್ರಿಲ್‌ನಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾ ವೇಶದಲ್ಲಿ ವೇದಿಕೆ ಮೇಲೆ ಸಿಎಂ ಮಾತನಾಡುವಾಗ ಕೆಲ ಬಿಜೆಪಿ ಕಾರ್ಯಕರ್ತೆಯರು ಕಪ್ಪುಬಾವುಟ ಪ್ರದರ್ಶಿಸಿದ್ದರು. ಇದಕ್ಕೆ ಸಿಎಂ ಧಾರವಾಡದ ಎಎಸ್ಪಿ ನಾರಾಯಣ ರನ್ನು ತರಾಟೆಗೆ ತೆಗೆದುಕೊಂಡು ಕೈ ಎತ್ತಿದ್ದರು.

ಎಲ್ಲೆಂದರಲ್ಲಿ ಕಸ ಎಸೆದು ಹೋಗ್ತಿದ್ದಾರಾ? ಈ ವಾಟ್ಸಾಪ್ ನಂಬರ್​ಗೆ ಫೋಟೋ ಕಳುಹಿಸಿ ಎಂದ ಬಿಬಿಎಂಪಿ!

Leave a Reply

Your email address will not be published. Required fields are marked *