ಮುಂಬೈ: ಭಾರತದ ಅತಿ ದೊಡ್ಡ ಸಮೂಹ ಸಂಸ್ಥೆ ಟಾಟಾ ಸನ್ಸ್ ನ ಗೌರವಾಧ್ಯಕ್ಷ ರತನ್ ಟಾಟಾ ಬುಧವಾರ ರಾತ್ರಿ ನಿಧನರಾಗಿದ್ದಾರೆ.
86 ವರ್ಷದ ರತನ್ ಟಾಟಾ ಅವರು ತಮ್ಮ ವೃದ್ಧಾಪ್ಯ ಸಂಬಂಧಿ ಕಾಯಿಲೆಗಳಿಗೆ ಸೋಮವಾರ ಚಿಕಿತ್ಸೆಗೊಳಗಾಗಿದ್ದರು. ಇಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.
1991ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷರಾಗಿದ್ದ ರತನ್ ಟಾಟಾ, ತಮ್ಮ ಸಂಸ್ಥೆಯನ್ನು 100 ಬಿಲಿಯನ್ ಡಾಲರ್ ಮೌಲ್ಯದ ಜಾಗತಿಕ ದರ್ಜೆಯ ಸಾಮ್ರಾಜ್ಯವನ್ನಾಗಿ ವಿಸ್ತರಿಸಿದ್ದರು. ಡಿಸೆಂಬರ್ 2012ರಲ್ಲಿ ಟಾಟಾ ಸನ್ಸ್ ಸಮೂಹ ಸಂಸ್ಥೆಯ ಅಧ್ಯಕ್ಷ ಹುದ್ದೆಯಿಂದ ನಿವೃತ್ತರಾಗಿದ್ದ ರತನ್ ಟಾಟಾ, ನಂತರ ಗೌರವಾಧ್ಯಕ್ಷರಾಗಿ ನೇಮಕಗೊಂಡಿದ್ದರು.
ರತನ್ ಟಾಟಾ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಹಿತ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಶಾಸಕ ಮುನಿರತ್ನ ಬಳಿ ನಾಲ್ವರು ಮಾಜಿ ಮುಖ್ಯಮಂತ್ರಿಗಳ ಖಾಸಗಿ ವಿಡಿಯೋಗಳಿವೆ: ಅತ್ಯಾಚಾರ ಸಂತ್ರಸ್ತೆಯ ಸ್ಫೋಟಕ ಆರೋಪ!
ರಾಜ್ಯದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಇನ್ಮುಂದೆ ಯಾವುದೇ ಗ್ರೇಸ್ ಮಾರ್ಕ್ಸ್ ಇರಲ್ಲ!


