BBMP
Loading ...

images

Greater Bengaluru News9 : ರಾಜ್ಯದಲ್ಲಿ ಅಕ್ರಮವಾಗಿ ಹೊಂದಿರುವ ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿನ) ಪಡಿತರ ಚೀಟಿಗಳನ್ನು ಗುರುತಿಸಿ ಪರಿಷ್ಕರಣೆ ಕಾರ್ಯವನ್ನು ಸರ್ಕಾರ ವೇಗಗೊಳಿಸಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ಗುರುವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ 7.76 ಲಕ್ಷ ಅಕ್ರಮ ಬಿಪಿಎಲ್ ಕಾರ್ಡ್‌ಗಳನ್ನು ಕೇಂದ್ರ ಸರ್ಕಾರ ಗುರುತಿಸಿದ್ದು, ಅವುಗಳ ಪರಿಶೀಲನೆ ಮತ್ತು ಪರಿಷ್ಕರಣೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದರು.

ಈವರೆಗೆ ಸುಮಾರು 50 ಶೇಕಡಾ ಪರಿಷ್ಕರಣೆ ಕಾರ್ಯ ಪೂರ್ಣಗೊಂಡಿದ್ದು, 4,32,295 ಬಿಪಿಎಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತಿಸಲಾಗಿದೆ. ಉಳಿದ ಅಕ್ರಮ ಬಿಪಿಎಲ್ ಕಾರ್ಡ್‌ಗಳನ್ನೂ ಶೀಘ್ರದಲ್ಲೇ ಎಪಿಎಲ್‌ಗೆ ಪರಿವರ್ತಿಸಲಾಗುವುದು ಎಂದು ತಿಳಿಸಿದರು.

ಯಾವುದೇ ಅರ್ಹ ಫಲಾನುಭವಿಯ ಬಿಪಿಎಲ್ ಕಾರ್ಡ್ ತಪ್ಪಾಗಿ ಎಪಿಎಲ್‌ಗೆ ಪರಿವರ್ತನೆಯಾದರೆ, ಅದನ್ನು 15 ದಿನಗಳೊಳಗೆ ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.

Leave a Reply

Your email address will not be published. Required fields are marked *