ನವದೆಹಲಿ: ಜೂನ್.7ರಂದು ಎನ್ ಡಿ ಎ ನಾಯಕರಿಂದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ಈ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದಲ್ಲಿ 3ನೇ ಬಾರಿಗೆ ಸರ್ಕಾರ ರಚಿಸೋದಕ್ಕೆ ಹಕ್ಕು ಮಂಡಿಸಲಿದ್ದಾರೆ.
ಮೋದಿ ನೇತೃತ್ವದಲ್ಲಿ ಇಂದು ಎನ್ ಡಿಎ ಸಂಸದ ಸಭೆ ನಡೆಯಿತು. ಈ ಸಭೆಯಲ್ಲಿ ಎನ್ ಡಿಎಗೆ ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಬೆಂಬಲ ಘೋಷಿಸಿ, ಪತ್ರವನ್ನು ನೀಡಿದ್ದಾರೆ. ಅಲ್ಲದೇ ಜೂನ್.7ರಂದು ರಾಷ್ಟ್ರಪತಿ ಭೇಟಿಯಾಗಿ, ಸರ್ಕಾರ ರಚಿಸಲು ಹಕ್ಕು ಮಂಡಿಸೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ.
ಜೂನ್.7ರಂದು ಸಂಜೆ 5 ಗಂಟೆಗೆ ಎನ್ ಡಿಎ ಮೈತ್ರಿ ಕೂಟದ ಸಂಸದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ. ರಾಷ್ಟ್ರಪತಿಯನ್ನು ಭೇಟಿಯಾಗಿ ಸರ್ಕಾರ ರಚಿಸೋದಕ್ಕೆ ಹಕ್ಕು ಮಂಡನೆ ಮಾಡಲಿದ್ದಾರೆ.
ಜೂನ್.8ರಂದು ನರೇಂದ್ರ ಮೋದಿಯವರು 3ನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸೋ ಸಾಧ್ಯತೆ ಇದೆ. ಅವರೊಟ್ಟಿಗೆ ಕೆಲ ಸಂಸದರು ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎನ್ನಲಾಗುತ್ತಿದೆ.


