BBMP
Loading ...

Kamal Hassan

ಸಾವಿರಾರು ವರ್ಷಗಳ ಭವ್ಯ ಇತಿಹಾಸ, ಸ್ವತಂತ್ರ್ಯ ಲಿಪಿ, ಶಾಸ್ತ್ರೀಯ ಸ್ಥಾನಮಾನ ಹೊಂದಿರುವ ಶ್ರೀಮಂತ ಭಾಷೆ ಕನ್ನಡ. ಕೋಟ್ಯಾಂತರ ಕರುನಾಡಿಗರ ಜೀವನಾಡಿಯಾಗಿರುವ ಹೆಮ್ಮೆಯ ಕನ್ನಡ ಭಾಷೆಗೆ ನಟ ಕಮಲ್ ಹಾಸನ್‌ ಅವರು ಅವಮಾನಿಸಿದ್ದಾರೆ. ಕಮಲ್ ಹಾಸನ್ ಅವರ ಹೇಳಿಕೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಇತ್ತೀಚೆಗೆ ಥಗ್ ಲೈಫ್ ಅನ್ನೋ ತಮಿಳು ಸಿನಿಮಾದ ಇವೆಂಟ್‌ನಲ್ಲಿ ನಟ ಕಮಲ್ ಹಾಸನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ತಮಿಳಿನಿಂದ ಕನ್ನಡ ಹುಟ್ಟಿದ್ದು ಅನ್ನೋ ಮೂಲಕ ಆಕ್ರೋಶಕ್ಕೆ ತುತ್ತಾಗಿದ್ದಾರೆ.

ನಟ ಶಿವರಾಜ್​ಕುಮಾರ್ ಎದುರು ಡಾ.ರಾಜ್​ಕುಮಾರ್ ಅವರ ಬಗ್ಗೆ ತಮಗಿರುವ ಗೌರವ ಹಂಚಿಕೊಂಡಿದ್ದ ಕಮಲ್ ಹಾಸನ್ ಅವರು ನಿಮ್ಮ ಕನ್ನಡ ಹುಟ್ಟಿದ್ದು ತಮಿಳಿನಿಂದ ಎಂದಿದ್ದಾರೆ. ಕನ್ನಡಿಗರ ಪ್ರೀತಿ, ಗೌರವಕ್ಕೆ ವಂದಿಸುತ್ತಲೇ ನಿಮ್ಮ ಕನ್ನಡ ನಮ್ಮಿಂದ ಬಂದಿದ್ದು ಎಂದು ಕಮಲ್ ಹಾಸನ್ ಹೇಳಿದ್ದಕ್ಕೆ ವಿರೋಧ ವ್ಯಕ್ತವಾಗಿದೆ.

ಕಮಲ್ ಹಾಸನ್​ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಕನ್ನಡಿಗರು ಕೆಂಡಾಮಂಡಲರಾಗಿದ್ದು, ಕನ್ನಡ ತಮಿಳಿನಿಂದ ಬಂದಿಲ್ಲ. ತಮಿಳಿಗಿಂತ ಕನ್ನಡ ಭಾಷೆಯೇ ಪುರಾತನವಾದದ್ದು ಎಂದು ಕನ್ನಡಿಗರು ಕಿಡಿಕಾರುತ್ತಿದ್ದಾರೆ.

ಬೈಕ್​ ಸವಾರನ ಮೇಲೆ ಉರುಳಿದ ಬೃಹತ್​ ಮರ; ಬಿಬಿಎಂಪಿ ವಿರುದ್ದ ಎಫ್​ಐಆರ್​ ದಾಖಲು

Leave a Reply

Your email address will not be published. Required fields are marked *