Greater Bengaluru News9 : ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ( KSLECA ) ಕೇಂದ್ರ ಸಮಿತಿ ಆವರಣದಲ್ಲಿ, ದಿನಾಂಕ 15/08/2026ರ ಶನಿವಾರದಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.

ಬೆಳಗ್ಗೆ 8:00 ಗಂಟೆಗೆ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಸಂಘದ ನೆಚ್ಚಿನ ಗೌರವ ರಾಜ್ಯಾಧ್ಯಕ್ಷರಾದ ಸಿ. ರಮೇಶ್ ಅವರ ಅಮೂಲ್ಯ ಅಧ್ಯಕ್ಷತೆಯಲ್ಲಿ ಹಾಗೂ ಸಂಘದ ಹಿರಿಯ ಪದಾಧಿಕಾರಿಗಳ ಸಮ್ಮುಖದಲ್ಲಿ ರಾಷ್ಟ್ರೀಯ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.
ಈ ಮಹತ್ವದ ಸಮಾರಂಭದಲ್ಲಿ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರು, ವಿವಿಧ ಸಮಿತಿಗಳ ಛೇರ್ಮನ್ ಹಾಗೂ ವೈಸ್ ಛೇರ್ಮನ್ಗಳು ಪಾಲ್ಗೊಂಡಿದ್ದರು. ಇದರೊಂದಿಗೆ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ಸಮಿತಿ, ತಾಲೂಕು ಸಮಿತಿ ಹಾಗೂ ಉಪ ಸಮಿತಿಗಳ ಪದಾಧಿಕಾರಿಗಳು ಮತ್ತು ಸದಸ್ಯರು ಕೂಡ ಭಾಗವಹಿಸಿದ್ದರು.
ಎಲ್ಲರ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದ್ದಕ್ಕೆ ರಾಜ್ಯ ಪ್ರಚಾರ ಸಮಿತಿ ಛೇರ್ಮನ್ ಆದ ಆರ್. ಶಿವಕುಮಾರ್ ಹಾಗೂ ಹೋರಾಟ ಸಮಿತಿಯ ಚೇರ್ಮನ್ ಹಾಗೂ ಬಿಬಿಎಂಪಿ ನ್ಯೂಸ್9 ಸಂಪಾದಕರಾದ ವೈ.ಎಚ್. ಆನಂದ್ ಅವರು KSLECA (ರಿ) ಬೆಂಗಳೂರು ಘಟಕದ ಪರವಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸಿದರು.



