ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಸರ್ಕಾರಿ ನೌಕರಿ ಬಿಟ್ಟು ಸನ್ಯಾಸತ್ವ ದೀಕ್ಷೆ ಪಡೆಯಲು ಕೆಎಎಸ್ ಅಧಿಕಾರಿಯೊಬ್ಬರು ಮುಂದಾಗಿದ್ದಾರೆ.
ಮಂಡ್ಯ ಜಿಲ್ಲೆಯ ಎಡಿಸಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಚ್.ಎಲ್.ನಾಗರಾಜು ಅವರು ಇದೀಗ ನಾಗರೀಕ ಸೇವೆ ತೊರೆದು ಸನ್ಯಾಸತ್ವ ಸ್ವೀಕಾರಕ್ಕೆ ನಿರ್ಧಾರ ಮಾಡಿದ್ದಾರೆ. ಸ್ವಯಂ ನಿವೃತ್ತಿ ಪಡೆದು ದೀಕ್ಷೆ ಸ್ವೀಕರಿಸಲಿರುವ ಮಂಡ್ಯ ಅಪರ ಜಿಲ್ಲಾಧಿಕಾರಿ ನಾಗರಾಜು ಅವರ ನಿರ್ಧಾರ ಸಾರ್ವಜನಿಕರಲ್ಲಿ ಅಚ್ಚರಿ ಮೂಡಿಸಿದೆ.
ಕೆಲವೇ ದಿನಗಳಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಲಿರುವ ನಾಗರಾಜು ಅವರು ಬಳಿಕ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದಲ್ಲಿ ಸನ್ಯಾಸ ದೀಕ್ಷೆ ಸ್ವೀಕಾರ ಮಾಡಿ ಶ್ರೀ ಚಂದ್ರಶೇಖರ ಸ್ವಾಮೀಜಿ ಶಿಷ್ಯರಾಗಿ ಮುಂದುವರೆಯಲಿದ್ದಾರೆ ಎಂದು ನಾಗರಾಜು ಅವರ ಆಪ್ತ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.
ಈ ಹಿಂದೆಯೂ ಸಹ ನಾಗರಾಜು ಅವರು ಸನ್ಯಾಸತ್ವ ಸ್ವೀಕರಿಸಿದ್ದರು. 2011ರಲ್ಲಿ ಮಂಡ್ಯ ಜಿಲ್ಲೆಯ ಕೆಆರ್ಪೇಟೆ ತಹಶಿಲ್ದಾರ್ ಆಗಿ ಕೆಲಸ ಮಾಡುತ್ತಿದ್ದ ನಾಗರಾಜು ಅವರು ತಹಶಿಲ್ದಾರ್ ಹುದ್ದೆ ತೊರೆದು ಆದಿಚುಂಚನಗಿರಿ ಮಠದಲ್ಲಿ ಶ್ರೀಬಾಲಗಂಗಾಧರನಾಥ ಶ್ರೀಗಳಿಂದ ಸ್ವಾಮೀಜಿಯಾಗಿ ದೀಕ್ಷೆ ಪಡೆದಿದ್ದರು.
ಚಾರ್ಜ್ಶೀಟ್ನಿಂದ ಹೆಸರು ತೆಗೆಯಲು 1 ಲಕ್ಷ ಲಂಚಕ್ಕೆ ಬೇಡಿಕೆ: 50 ಸಾವಿರ ರೂ. ಪಡೆಯುವಾಗ ಲೋಕಾ ಬಲೆಗೆ ಬಿದ್ದ ASI


