ಬೆಂಗಳೂರು: ಇದೇ ತಿಂಗಳು 27ರಂದು ಕೆಂಪೇಗೌಡ ಜಯಂತಿ ದಿನದಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಜೂನ್ 27ರಂದು ಕೆಂಪೇಗೌಡ ಜಯಂತಿ ದಿನದಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು. ಸುಮನಹಳ್ಳಿ ಬಳಿ 5 ಎಕರೆ ಜಾಗವನ್ನು ನಿಗದಿ ಮಾಡಿದ್ದು, ಜಯಂತಿ ಅಂಗವಾಗಿ ಅಂದೇ ಭೂಮಿ ಪೂಜೆ ಮಾಡಲು ತೀರ್ಮಾನಿಸಿದ್ದೇವೆ. ಈ ಕಟ್ಟಡದ ವಾಸ್ತುಶಿಲ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಬನ್ನಿ, ಈ ಮಹತ್ಕಾರ್ಯದಲ್ಲಿ ನೀವೂ ಪಾಲ್ಗೊಳ್ಳಿ ಎಂದು ಡಿ.ಕೆ. ಶಿವಕುಮಾರ್ ಅವರು ತಮ್ಮ ಫೇಸ್ಬುಕ್ ಪೋಸ್ಟ್ ಮೂಲಕ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರ ಕಳೆದ ಸರ್ಕಾರದಲ್ಲಿ ಪ್ರತಿ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ ಮಾಡಲಾಯಿತು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಮ್ಮನಹಳ್ಳಿ ಬಳಿ 5 ಎಕರೆ ಜಾಗವನ್ನು ನಿಗದಿ ಮಾಡಿದ್ದು, ಜೂನ್ 27ರಂದು ಕೆಂಪೇಗೌಡ ಜಯಂತಿ ಅಂಗವಾಗಿ ಅಂದೇ ಭೂಮಿ ಪೂಜೆ ಮಾಡಲು ತೀರ್ಮಾನಿಸಿದ್ದೇವೆ. ಈ ಕಟ್ಟಡದ ವಾಸ್ತುಶಿಲ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಜೂನ್ 3ರಂದು ಸುದ್ದಿಗೋಷ್ಠಿಯಲ್ಲಿ ಡಿಕೆಶಿ ತಿಳಿಸಿದರು.
ಪ್ರತಿ ವರ್ಷದಂತೆ ಈ ವರ್ಷ ಕೆಂಪೇಗೌಡರ ಗೋಪುರಗಳಿಂದ ಜ್ಯೋತಿ ಬರಲಿದ್ದು, ಪ್ರತಿ ಗೋಪುರಕ್ಕೂ ಒಬ್ಬರು ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. 27ರಂದು ಬೆಳಗ್ಗೆ ಬಾಬು ಜಗಜೀವನ್ ರಾಮ್ ಅವರ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದರು.
27 ರಂದು ಸಂಜೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾಡಬೇಕಿದ್ದು, ಇದನ್ನು ವಾರ್ಡ್ ಮಟ್ಟಕ್ಕೆ ಸೀಮಿತಗೊಳಿಸುವುದು ಬೇಡ. ರಾಜ್ಯೋತ್ಸವ ಪ್ರಶಸ್ತಿಯಂತೆ ಎಲ್ಲಾ ವರ್ಗಕ್ಕೆ ಕ್ರೀಡೆ, ಸಾಹಿತ್ಯ, ಕಲೆ, ಪತ್ರಿಕೋದ್ಯಮ, ಕೈಗಾರಿಗೆ, ಪರಿಸರ ಸಂರಕ್ಷಣೆ ಸೇರಿ ಎಲ್ಲಾ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲು ಚಿಂತನೆ ಮಾಡುತ್ತಿದ್ದೇವೆ. ಇದಕ್ಕೆ ಮಾರ್ಗಸೂಚಿ ನಿಗದಿ ಮಾಡಿ ಇದಕ್ಕೆ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದ್ದರು.
ಈ ವರ್ಷದಿಂದ ಕೆಂಪೇಗೌಡ ಪ್ರಾಧಿಕಾರ ವತಿಯಿಂದ ಮೈಸೂರು ದಸರಕ್ಕೆ ಪ್ರತಿ ವರ್ಷ ಒಂದು ಸ್ಥಬ್ಧಚಿತ್ರ ಕಳಿಸುವ ಕೆಲಸವನ್ನು ಮಾಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಿಸಲು ಆರ್ಥಿಕ ನೆರವು ನೀಡಲಾಗುವುದು. ಶಾಲೆಗಳಲ್ಲಿ ಮಕ್ಕಳ ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಆಮೂಲಕ ಬೆಂಗಳೂರು ಹಾಗೂ ಕೆಂಪೇಗೌಡರ ಇತಿಹಾಸವನ್ನು ಮಕ್ಕಳಲ್ಲಿ ಅರಿವು ಮೂಡಿಸಲಾಗುವುದು ಎಂದಿದ್ದಾರೆ.
ತಿರುಪತಿಗೆ ತೆರಳುವ ರಾಜ್ಯದ ಭಕ್ತರಿಗೆ ಸಿಹಿ ಸುದ್ದಿ: ಸೇವೆಗೆ ಸಿದ್ಧವಾಯ್ತು ಕೃಷ್ಣ ರಾಜೇಂದ್ರ ಕಲ್ಯಾಣ ಮಂಟಪ!


