BBMP
Loading ...

Nanjavadhuta Shree

ಬೆಂಗಳೂರು: ಇಂದು (ಜೂನ್​ 27) ಬೆಂಗಳೂರಿನ ವಿ.ವಿ. ಪುರದ ಕೆ.ಆರ್. ರಸ್ತೆಯ ರಾಜ್ಯ ಒಕ್ಕಲಿಗರ ಸಂಘದಲ್ಲಿ ನೆಡದ “ನಾಡಪ್ರಭು ಕೆಂಪೇಗೌಡರ ಜಯಂತಿ” ಕಾರ್ಯಕ್ರಮದಲ್ಲಿ ಶ್ರೀ ಸ್ಪಟಿಕಪುರಿ ಮಹಾ ಸಂಸ್ಥಾನ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಂಜಾವಧೂತ ಮಹಾ ಸ್ವಾಮೀಜಿಯವರು ದಿವ್ಯ ಸಾನಿಧ್ಯ ವಹಿಸಿ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಪುಷ್ಪರ್ಚನೆ ನೆರೆವೇರಿಸಿದರು.

ಈ ವಿಶೇಷ ಸಂದರ್ಭದಲ್ಲಿ ಬೆಂಗಳೂರಿನ ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಯವರು, ಕೆಂಗೇರಿಯ ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೂಜ್ಯ ಶ್ರೀ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಯವರು, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಗಳು, ಸಮುದಾಯದ ಅನೇಕ ಗಣ್ಯರು, ಮುಖಂಡರು ಹಾಗೂ ಭಕ್ತರು ಪರಮಪೂಜ್ಯ ಜಗದ್ಗುರುಗಳ ಆಶೀರ್ವಾದಗಳನ್ನು ಪಡೆದರು.

ಇಂದು ಸಂಜೆ ಕೆಂಪೇಗೌಡ ಪ್ರಶಸ್ತಿ ಪ್ರದಾನ
ಬಿಬಿಎಂಪಿ ಮಟ್ಟದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವು ಬಿಬಿಎಂಪಿ ಕೇಂದ್ರ ಕಛೇರಿ ಆವರಣದಲ್ಲಿರುವ ಡಾ. ರಾಜ್ ಕುಮಾರ್ ಗಾಜಿನ ಮನೆಯಲ್ಲಿ ನಡೆಯಲಿದೆ. ಸಾಂಸ್ಕೃತಿಕ ಕಾರ್ಯಕ್ರಮವು ಸಂಜೆ 4.30 ರಿಂದ 6.00 ಗಂಟೆಯವರೆಗೆ ನಡೆಯಲಿದ್ದು, ಮಾನ್ಯ ಉಪ ಮುಖ್ಯಮಂತ್ರಿಗಳು, ಸಚಿವರುಗಳು, ಶಾಸಕರುಗಳು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರಿಗೆ ಸಂಜೆ 6.00 ಗಂಟೆಗೆ ನಾಡಪ್ರಭು ಕೆಂಪೇಗೌಡ ಪ್ರಶಸ್ತಿ ಪ್ರದಾನ ಹಾಗೂ ಉತ್ತಮ ಅಧಿಕಾರಿ ನೌಕಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನೆರವೇರಲಿದೆ.

ಬೆಂಗಳೂರು ನಗರ ಸುಮ್ಮನಹಳ್ಳಿ ವೃತ್ತದ ಬಳಿಯ ಹೊರವರ್ತುಲ ರಸ್ತೆ (ಮಾಗಡಿ ರಸ್ತೆ) ಯಲ್ಲಿ ಕೆಂಪೇಗೌಡ ಭವನದ ನಿರ್ಮಾಣ ಸ್ಥಳಕ್ಕೆ ಬೆಳಗ್ಗೆ 12.15 ಗಂಟೆಗೆ ಶಂಕುಸ್ಥಾಪನೆ ನೆರವೇರಲಿದೆ.

ನಾಡಪ್ರಭು ಕೆಂಪೇಗೌಡರ 516ನೇ ಜಯಂತಿ; ಮಾಜಿ ಪ್ರಧಾನಿ HDD, ಕೇಂದ್ರ ಸಚಿವ HD, ಡಿಸಿಎಂ ಡಿಕೆಶಿ ಸೇರಿ ಗಣ್ಯರಿಂದ ಶುಭಾಶಯ

Leave a Reply

Your email address will not be published. Required fields are marked *