ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಆಗಸ್ಟ್.16ರಂದು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.
ದಿನಾಂಕ: 16-08-2025 ಶನಿವಾರದಂದು “ಶ್ರೀ ಕೃಷ್ಣ ಜನ್ಮಾಷ್ಟಮಿ” ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ರವರು ತಿಳಿಸಿದ್ದಾರೆ.


