ಬೆಂಗಳೂರು: ಸ್ವಾಧೀನಾನುಭವ ಪ್ರಮಾಣಪತ್ರ (OC) ವಿನಾಯಿತಿ ಕೋರಿ ಮಾನ್ಯ ಉಪಮುಖ್ಯಮಂತ್ರಿ ಡಿಕೆ ಶಿವಕಮಾರ್ ಅವರ ಬಳಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರ ಸಂಘದ ಕೇಂದ್ರ ಸಮಿತಿ ಮತ್ತು ಎಲ್ಲಾ ಸ್ಥಳೀಯ ಸಮಿತಿ ಸದಸ್ಯರ ನಿಯೋಗ ಬೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಲಾಯಿತು.
ವಿದ್ಯುತ್ ಗುತ್ತಿಗೆದಾರರು ಎದುರಿಸುತ್ತಿರುವ ಸಮಸ್ಯೆಗಳು, ಸರ್ಕಾರದ ನಿಯಮಗಳಿಂದ ಗುತ್ತಿಗೆದಾರರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ವಿದ್ಯುತ್ ಕಾಮಗಾರಿಗಳಲ್ಲಿ ಗುತ್ತಿಗೆದಾರರಿಗೆ ನೀಡಬೇಕಾದ ಆದ್ಯತೆ ಮತ್ತು ಸರ್ಕಾರದಿಂದ ವಿದ್ಯುತ್ ಗುತ್ತಿಗೆದಾರರಿಗೆ ಸಿಗಬೇಕಿರುವ ಸವಲತ್ತುಗಳ ಬಗ್ಗೆ ಡಿ ಕೆ ಶಿವಕುಮಾರ್ ಅವರ ಬಳಿ ವಿವರಿಸಲಾಯಿತು. ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸಿ. ರಮೇಶ್ ಅವರು ಎಲ್ಲ ಸಮಸ್ಯೆಗಳನ್ನು ಉಪಮುಖ್ಯಮಂತ್ರಿಗಳಿಗೆ ವಿವರಿಸಿದರು.
ಗುತ್ತಿಗೆದಾರರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಕಾನೂನಾತ್ಮಕವಾಗಿ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ಎಲ್ಲಾ ಇಲಾಖೆಗಳಲ್ಲೂ ಕನ್ನಡ ಬಳಕೆ ಕಡ್ಡಾಯ, ತಪ್ಪಿದರೆ ಶಿಸ್ತು ಕ್ರಮ: ರಾಜ್ಯ ಸರ್ಕಾರ ಆದೇಶ


