BBMP
Loading ...

Muniratna new

ಬೆಂಗಳೂರು : ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ಮಂಗಳವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಈಗಾಗಲೇ ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದು, ಜಾಮೀನು ಅರ್ಜಿಯ ಆದೇಶವನ್ನು ಕೋರ್ಟ್ ನ ಜಡ್ಜ್ ಸಂತೋಷ್ ಗಜಾನನ ಭಟ್ ನಾಳೆಗೆ ಕಾಯ್ದಿರಿಸಿದ್ದಾರೆ.

ಇದೀಗ ಎರಡನೇ ಕೇಸಿನಲ್ಲೂ ಕೂಡ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿದೆ. ಹೌದು ಇಂದು ಬೆಂಗಳೂರು 82ನೇ ಸಿಸಿಎಚ್ ಕೋರ್ಟ್ ನಲ್ಲಿ ನಿರೀಕ್ಷಣ ಜಾಮೀನು ಅರ್ಜಿ ವಿಚರಣೆ ನಡೆಯಿತು. ಸದ್ಯ ಎರಡನೇ ಕೇಸಿನಲ್ಲಿ ಕೂಡ ನ್ಯಾಯಾಲಯ ಮುನಿರತ್ನ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿದೆ.

ಬಿಬಿಎಂಪಿ ಗುತ್ತಿಗೆದಾರ ಚಲುವರಾಜು ಅವರಿಗೆ ಕಿರುಕುಳ ನೀಡಿರುವುದು, ಜಾತಿ ನಿಂದನೆ ಮತ್ತು ಮಹಿಳೆಯ ಗೌರವಕ್ಕೆ ಧಕ್ಕೆ ತಂದ ಆರೋಪದ ಮೇಲೆ ಬೆಂಗಳೂರಿನಲ್ಲಿ ಎರಡು ಪ್ರಕರಣಗಳು ದಾಖಲಾದ ನಂತರ ಸೆಪ್ಟೆಂಬರ್ 14 ರಂದು ಕೋಲಾರದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿತ್ತು.

ಮೊದಲ ಎಫ್‌ಐಆರ್ನಲ್ಲಿ ಮುನಿರತ್ನ ವಿರುದ್ಧ ಕ್ರಿಮಿನಲ್ ಬೆದರಿಕೆ, ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ, ಸುಲಿಗೆ ಮಾಡಲು ವ್ಯಕ್ತಿಯನ್ನು ಗಾಯಗೊಳಿಸುವ ಭಯ, ವಂಚನೆ ಮತ್ತು ಸ್ವಯಂಪ್ರೇರಿತವಾಗಿ ಸಿಎ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬೆಂಗಳೂರಿನಲ್ಲಿ ಪೌರ ಕಾರ್ಮಿಕರ ಮೇಲೆ ತೀವ್ರ ಹಲ್ಲೆ : ಬಿಬಿಎಂಪಿ ಮುಂಭಾಗ ಭಾರೀ ಪ್ರತಿಭಟನೆ!

Leave a Reply

Your email address will not be published. Required fields are marked *