BBMP
Loading ...

ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು ತಮ್ಮ ಕಾರ್ಯಾಚರಣೆಗೆ ಇನ್ನಷ್ಟು ಚುರುಕು ನೀಡಿದ್ದಾರೆ. ಇಂದು (ಜುಲೈ 11) ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಏಕಕಾಲದಲ್ಲಿ 56 ಕಡೆ ದಾಳಿ ನಡೆಸಿದ್ದು, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಬೆಳಗಿನ ಜಾವ ಸವಿ ನಿದ್ರೆಯಲ್ಲಿದ್ದ ಅಧಿಕಾರಿಗಳಿಗೆ ಲೋಕಾಯಕ್ತ ಪೊಲೀಸರು ದುಸ್ವಪ್ನವಾಗಿ ಎಂಟ್ರಿ ಕೊಟ್ಟಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ದೂರು ದಾಖಲಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ಈ ದಾಳಿ ಮಾಡಿದ್ದಾರೆ. ಸದ್ಯ ಅಧಿಕಾರಿಗಳ ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ.

11 ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆದಿದೆ. ಕೋಲಾರ ತಹಶೀಲ್ದಾರ್​ ವಿಜಣ್ಣ, ಹಾಸನದಲ್ಲಿ ಗ್ರೇಡ್‌-1 ಕಾರ್ಯದರ್ಶಿ ಜಗದೀಶ್‌, ದಾವಣಗೆರೆ ಇಇ ಡಿ.ಹೆಚ್‌ ಉಮೇಶ್. ಹಾಗೂ ಎಎಇಇ ಪ್ರಭಾಕರ್ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಈ ದಾಳಿಯಲ್ಲಿ ನೂರಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಮನಾರ್ಹ ಸಂಗತಿ ಅಂದರೆ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಕ್ಕೆ ಸಂಬಂಧಿಸಿದಂತೆ ಬುಧವಾರ (ಜುಲೈ 10) ಬೆಳಗ್ಗೆಯಷ್ಟೇ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು.

ದರ್ಶನ್​ಗೆ ಮನೆ ಊಟಕ್ಕೆ ಅನುಮತಿ ಕೊಟ್ಟರೂ ಬೇಕಾಬಿಟ್ಟಿ ಬಿರಿಯಾನಿ ತಿನ್ನೋ ಹಾಗಿಲ್ಲ: ಇಲ್ಲಿದೆ ರೂಲ್ಸ್ ವಿವರ

Leave a Reply

Your email address will not be published. Required fields are marked *