ಬೆಂಗಳೂರು: ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್ ವತಿಯಿಂದ ಇದೇ ಶನಿವಾರ (ಮಾರ್ಚ್ 8) ನಗರದ ಮಹಾಲಕ್ಷ್ಮೀಪುರಂನಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.
ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾದ ಕೆ. ಗೋಪಾಲಯ್ಯ ಅವರ ಪತ್ನಿ ಎಸ್.ಪಿ. ಹೇಮಲತಾ ಗೋಪಾಲಯ್ಯ ಅವರ ನೇತೃತ್ವದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಲಿದೆ.
ಮಹಿಳಾ ದಿನಾಚರಣೆ ವೇಳೆ ಮಹಿಳೆಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಶನಿವಾರ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಮಹಾಲಕ್ಷ್ಮೀಪುರಂನ ರಾಣಿ ಅಬ್ಬಕ್ಕ ಆಟದ ಮೈದಾನದಲ್ಲಿ ವಿಶ್ವ ಮಹಿಳಾ ದಿನ ಆಚರಣೆ ನಿಮಿತ್ತ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.



