BBMP
Loading ...

DKS

ಬೆಂಗಳೂರು: ‘ಬೆಂಗಳೂರಲ್ಲಿ 24 ಲಕ್ಷ ‘ಎ’ ಮತ್ತು ‘ಬಿ’ ಖಾತೆಗಳಿವೆ. ಈಗಾಗಲೇ 6.5 ಲಕ್ಷ‌ ಇ- ಖಾತೆಗಳನ್ನು ಜನರು ತೆಗೆದುಕೊಂಡಿದ್ದಾರೆ. ಜನರಿಗೆ ಆನ್ ಲೈನ್ ನಲ್ಲಿ ಆಸ್ತಿ ವಿವರಗಳು ನಿಖರವಾಗಿ ದೊರೆಯಬೇಕು. ಮುಂದಿನ‌ ದಿನಗಳಲ್ಲಿ ತೊಂದರೆಯಾಗಬಾರದು ಎಂಬುದು ನಮ್ಮ ಆಲೋಚನೆ. ಈ ಕಾರಣಕ್ಕೆ ಅಕ್ಟೋಬರ್ 22 ರಿಂದ ನವೆಂಬರ್ 1 ರವರೆಗೆ ಬೃಹತ್ ಜಾಗೃತಿ ಅಭಿಯಾನದ ಆಲೋಚನೆ ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್​ ಹೇಳಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಅವರು ವಿಧಾನಸೌಧದಲ್ಲಿ ಮಂಗಳವಾರ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.

ಈ ಅಭಿಯಾನ ಯಶಸ್ವಿಗೊಳಿಸಲು ಶಿಕ್ಷಕರು, ಬೆಸ್ಕಾಂ ಬಿಲ್‌ ಕಲೆಕ್ಟರ್ ಗಳು, ಪಾಲಿಕೆಯ ನೌಕರರ ಭಾಗವಹಿಸುವಿಕೆ ಬಗ್ಗೆ ಚರ್ಚಿಸಲು ಸೂಚನೆ ನೀಡಿದ್ದೇನೆ. ಈ ಬಗ್ಗೆ ಮನೆ ಮನೆಗೆ ತೆರಳಿ ತಿಳುವಳಿಕೆ ನೀಡಲಾಗುವುದು. ಬೆಂಗಳೂರು ನಗರದ ಸಾರ್ವಜನಿಕರು, ರಾಜಕೀಯ ಪಕ್ಷಗಳ ಕಾರ್ಯಕರ್ತರು ಈ ಅಭಿಯಾನದ ಪ್ರಚಾರದಲ್ಲಿ ಭಾಗವಹಿಸಬಹುದು. ಆದರೆ ಇವರಿಗೆ ಜವಾಬ್ದಾರಿ ನೀಡುವುದಿಲ್ಲ ಎಂದರು.

ಬಿ ಖಾತಾ ಇದ್ದವರಿಗೆ ಎ ಖಾತಾ ಪಡೆಯಲು ಮಾನದಂತ ಆ.15ರಂದು ಬಿಡುಗಡೆ

ಇನ್ನು ಆಗಸ್ಟ್ 15 ರಿಂದ ‘ಬಿ’ ಖಾತೆಯಿಂದ ‘ಎ’ ಖಾತೆ ಪಡೆಯಲು ಅನುಸರಿಸಬೇಕಾದ ಮಾನದಂಡಗಳನ್ನು ಬಿಡುಗಡೆ ಮಾಡಲಾಗುವುದು. ನಗರದಲ್ಲಿ ಲಕ್ಷಾಂತರ ಬಿ ಖಾತಾಗಳಿದ್ದು, ಅವುಗಳ ಪೈಕಿ ಯಾರು ಎ ಖಾತಾ ಪಡೆಯಲು ಅರ್ಹರಿದ್ದಾರೆ ಎಂಬುದನ್ನು ಮಾನದಂಡಗಳಲ್ಲಿ ಸೂಚಿಸಲಾಗುತ್ತದೆ. ನಂತರ ಯಾರಿಗೆ ಅರ್ಜಿ ಹಾಕಲು ಅರ್ಹತೆಯಿದೆ, ಯಾವ ರೀತಿ ಅರ್ಜಿ ಹಾಕಬೇಕು ಎನ್ನುವ ವಿವರಗಳನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

3,700 ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ: ಡಿಸಿಎಂ ಡಿಕೆಶಿ ಹೇಳಿಕೆ

Leave a Reply

Your email address will not be published. Required fields are marked *