BBMP
Loading ...

Mescom Bribe

Greater Bengaluru News9 : ಗುತ್ತಿಗೆದಾರರಿಗೆ ಬಿಲ್ ಪಾವತಿಸಲು 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಮೆಸ್ಕಾಂ ಕಿರಿಯ ಎಂಜಿನಿಯರ್‌ ಮಲ್ಲಿಕಾರ್ಜುನಸ್ವಾಮಿ ಎಂಬುವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸಿವಿಲ್ ಕಾಮಗಾರಿಯ ಬಾಕಿ ಬಿಲ್ 10 ಲಕ್ಷ ರೂ. ಪಾವತಿಸಲು 40 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಕಾಮಗಾರಿ ಪೂರ್ಣಗೊಂಡು ವರ್ಷ ಕಳೆದಿದ್ದರೂ ಬಿಲ್ ಪಾವತಿಸಲು ಸತಾಯಿಸಿದ್ದರು ಎಂದು ಗುತ್ತಿಗೆದಾರರೊಬ್ಬರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ನಗರದ ಆರ್.ಜಿ.ರಸ್ತೆಯಲ್ಲಿನ ಮೆಸ್ಕಾಂ ಕಚೇರಿಯಲ್ಲಿ ಲಂಚ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.

Leave a Reply

Your email address will not be published. Required fields are marked *