BBMP
Loading ...

ಬೆಂಗಳೂರು : ರಾಜ್ಯದ ರೈತರಿಗೆ ಹವಾಮಾನ ಇಲಾಖೆ ಸಿಹಿಸುದ್ದಿ ನೀಡಿದ್ದು, ರಾಜ್ಯಕ್ಕೆ 15 ದಿನ ಮೊದಲೇ ಮುಂಗಾರು ಮಳೆ ಪ್ರವೇಶಿಸಲಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮುಂಗಾರು ಮಳೆ ಈಗಾಗಲೇ ಕೇರಳಕ್ಕೆ ಪ್ರವೇಶಿಸಿದ್ದು, ಇಂದು ಕರ್ನಾಟಕಕ್ಕೂ ಎಂಟ್ರಿ ಕೊಡಲಿದೆ. ಪರಿಣಾ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಕರಾವಳಿ ಜಿಲ್ಲೆಗಳು ಸೇರಿದಂತೆ ಎಂಟು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ ಶಿವಮೊಗ್ಗ, ತುಮಕೂರು, ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ.

ಜೂನ್‌ 3ರ ನಾಳೆ ಉತ್ತರ ಒಳನಾಡಿಗೆ ಮುಂಗಾರು ಪ್ರವೇಶಿಸಲಿದ್ದು, ಯಾದಗಿರಿ,ಕೊಪ್ಪಳ, ರಾಯಚೂರು, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನಾ ಹೀಗೆಲ್ಲ ಬದುಕಿಲ್ಲ, ಸರಿಯಾದ ಟಾಯ್ಲೆಟ್, ಮಲಗಲು ರೂಂ ಕೊಡಿ: ಎಸ್​ಐಟಿ ಅಧಿಕಾರಿಗಳ ಜೊತೆ ಪ್ರಜ್ವಲ್ ಕಿರಿಕ್

Leave a Reply

Your email address will not be published. Required fields are marked *