BBMP
Loading ...

Metro

Greater Bengaluru News9 : ನಮ್ಮ ಮೆಟ್ರೋದ ಕಾರ್ಯಾಚರಣೆ ನಿಯಂತ್ರಣ ಕೇಂದ್ರ(OCC)ದಿಂದ ಪಡೆದ ಮಾಹಿತಿಯ ಪ್ರಕಾರ, ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.: ನಮ್ಮ ಮೆಟ್ರೋದ ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಒಂದು ರೈಲು ತಾಂತ್ರಿಕ ದೋಷದಿಂದ ಕೆಟ್ಟು ನಿಂತಿದ್ದು, ಮೆಟ್ರೋ ಸಂಚಾರದಲ್ಲಿ ಭಾಗೀ ವ್ಯತ್ಯಯ ಉಂಟಾಗಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ.

ನಮ್ಮ ಮೆಟ್ರೋದ ಕಾರ್ಯಾಚರಣೆ ನಿಯಂತ್ರಣ ಕೇಂದ್ರ(OCC)ದಿಂದ ಪಡೆದ ಮಾಹಿತಿಯ ಪ್ರಕಾರ, ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.

ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ತುರ್ತಾಗಿ ದೋಷವನ್ನು ಸರಿಪಡಿಸುವ ನಿಟ್ಟಿನಲ್ಲಿ , ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಪ್ರಸ್ತುತ ನೇರಳೆ ಮಾರ್ಗದಲ್ಲಿ ಮಾಗಡಿ ರಸ್ತೆ ಮತ್ತು ಚಲ್ಲಘಟ್ಟ ನಡುವೆ ಹಾಗೂ ಇಂದಿರಾನಗರ ಮತ್ತು ವೈಟ್‌ಫೀಲ್ಡ್(ಕಾಡುಗೋಡಿ) ರೈಲುಗಳು ಮಾತ್ರ ಸಂಚರಿಸುತ್ತಿವೆ.

ಇಂದು ರಾತ್ರಿ 8:00 ಗಂಟೆಯಿಂದ, ನೇರಳೆ ಮಾರ್ಗದಲ್ಲಿ ಮೆಟ್ರೋ ರೈಲು ಸೇವೆಗಳು ಪ್ರಸ್ತುತ ಕೆಳಕಂಡ ವಿಭಾಗಗಳಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತಿವೆ

ಇಂದಿರಾನಗರ ↔️ ವೈಟ್‌ಫೀಲ್ಡ್ (ಕಾಡುಗೋಡಿ)

ಮಾಗಡಿ ರಸ್ತೆ ↔️ ಚಲ್ಲಘಟ್ಟ

ಸಾಮಾನ್ಯ ಮೆಟ್ರೋ ಸೇವೆಯನ್ನು ಶೀಘ್ರದಲ್ಲಿ ಪುನಃಸ್ಥಾಪಿಸಲು ಬಿಎಂಆರ್‌ಸಿಎಲ್‌ನ ಕಾರ್ಯಾಚರಣೆ ಹಾಗೂ ನಿರ್ವಹಣಾ ತಂಡಗಳು ತುರ್ತು ಕ್ರಮಗಳನ್ನು ಕೈಗೊಳ್ಳುತ್ತಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯವಸ್ಥೆಯನ್ನು ಗಮನಿಸಿ ತಮ್ಮ ಪ್ರಯಾಣವನ್ನು ಯೋಜಿಸಿಕೊಳ್ಳುವಂತೆ ವಿನಂತಿಸಲಾಗಿದೆ. ಉಂಟಾಗಿರುವ ತಾತ್ಕಾಲಿಕ ಅನಾನುಕೂಲತೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸುತ್ತದೆ ಹಾಗೂ ಪ್ರಯಾಣಿಕರ ಸಹಕಾರಕ್ಕೆ ಧನ್ಯವಾದ ಹೇಳಿದೆ.

Leave a Reply

Your email address will not be published. Required fields are marked *