ಬೆಂಗಳೂರು: ಮುಡಾ ಪ್ರಕರಣದಲ್ಲಿ (MUDA Case) ಸಿಎಂ ಸಿದ್ದರಾಮಯ್ಯಗೆ (CM Siddaramaiah) ಅಸಲಿ ಸಂಕಷ್ಟದ ಸರಮಾಲೆ ಈಗ ಆರಂಭವಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ನಂತರ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ (FIR) ದಾಖಲಾಗಿದೆ.
ಸ್ನೇಹಮಯಿ ಕೃಷ್ಣ (Snehamayi Krishna) ಅವರ ದೂರಿನ ಆಧಾರದ ಮೇಲೆ ಮೈಸೂರಿನ ಲೋಕಾಯುಕ್ತ ಪೊಲೀಸರು (Lokayukta Police) ಸಿಎಂ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್‌ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.
ಯಾವೆಲ್ಲಾ ಸೆಕ್ಷನ್ ದಾಖಲು?
ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ನಾಲ್ವರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿ ಎಫ್‌ಐಆರ್ ದಾಖಲಾಗಿದೆ. ಹಾಗೇ ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ದಾಖಲಾಗಿದೆ.
ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.
ಮುಡಾ ಹಗರಣ: ಕೋರ್ಟ್ ಆದೇಶದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್‌ಐಆರ್ ದಾಖಲು


