BBMP
Loading ...

Siddaramaiah

ಬೆಂಗಳೂರು: ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕ್ಲೀನ್‌ ಚಿಟ್‌ ನೀಡಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.

ತನಿಖಾಧಿಕಾರಿ ಎಸ್‌ಪಿ ಉದೇಶ್ ಅವರು, ಇಂದು ಬೆಳಗ್ಗೆ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ.

82ನೇ ಸಿಟಿ ಸಿವಿಲ್ ಕೋರ್ಟ್ ನ ನ್ಯಾ.ಸಂತೋಷ್ ಗಜಾನನ ಭಟ್ ಅವರ ಮುಂದೆ 11, 200 ಸಾವಿರ ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ.

50 ಜನರ ಹೇಳಿಕೆಗಳನ್ನು ದಾಖಲು ಮಾಡಿದ ಪೊಲೀಸರು, 27 ಸಂಪುಟ, 11,200 ಪುಟಗಳ ತನಿಖಾ ವರದಿಯನ್ನು ಬಿ ರಿಪೋರ್ಟ್‌ ಎಂದೇ ಉಲ್ಲೇಖಿಸಿದ್ದಾರೆ.

ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪೊಲೀಸರು 50ಕ್ಕೂ ಹೆಚ್ಚು ಜನರ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಪ್ರಕರಣದಲ್ಲಿ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜ್ ಅವರಿಗೆ ಕ್ಲೀನ್ ಚಿಟ್ ನೀಡಲಾಗಿದೆ.

ಸದ್ಯ ಅಂತಿಮ ವರದಿ ಸಲ್ಲಿಕೆಯಾದರೂ ಪ್ರಕರಣದ ತನಿಖೆ ಮುಂದುವರೆಯಲಿದೆ. ಕ್ಲೀನ್ ಚಿಟ್ ನೀಡಿದ ನಾಲ್ವರನ್ನು ಹೊರತುಪಡಿಸಿ ಉಳಿದವರ ವಿರುದ್ಧ ಲೋಕಾಯುಕ್ತ ಪೊಲೀಸರು ತನಿಖೆ ಮುಂದುವರಿಸಲಿದ್ದಾರೆ.

ರಸ್ತೆಯಲ್ಲಿ ಕಸ ಎಸೆದ್ರೆ ನಿಮ್ಮ ಮನೆಗೆ ಬಂದು ದಂಡ ಹಾಕ್ತಾರೆ ಬಿಬಿಎಂಪಿ ಸಿಬ್ಬಂದಿ!

Leave a Reply

Your email address will not be published. Required fields are marked *