ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರಕ್ಕೆ ಸಂಬಂದಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅವ್ಯವಹಾರಕ್ಕೆ ಸಂಬಂಧಿಸಿದಂತೆ ದಿನಾಂಕ 10.07.2024 ರಂದು ಮಾನ್ಯ ಲೋಕಾಯುಕ್ತ ಕಚೇರಿಗೆ, ಮಾನವ ಹಕ್ಕುಗಳ ಆಯೋಗಕ್ಕೆ, ಚುನಾವಣಾ ಆಯೋಗಕ್ಕೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರ ವಿರುದ್ಧ ದೂರು ಸಲ್ಲಿಸಲಾಗಿದ್ದು ಆಗಿರುವ ವಂಚನೆಗಳಿಗೆ, ಸರ್ಕಾರದ ತಾರತಮ್ಯ ಧೋರಣೆಗಳಿಗೆ, ಚುನಾವಣೆ ಕಚೇರಿಗೆ ತಪ್ಪು ಮಾಹಿತಿ ನೀಡಿರುವ ಮುಖ್ಯಮಂತ್ರಿಗಳಾದ ಶ್ರೀಯುತ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ರೀತಿಯ ಕ್ರಮವನ್ನು ತೆಗೆದುಕೊಳ್ಳುವಂತೆ ಕೊರಲಾಗಿದೆ.
ದೂರು ದಾಖಲು
ಈಗಾಗಲೇ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಅವರು ದೂರು ದಾಖಲಿಸಿದ್ದು, ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ದೇವರಾಜ್ ಮತ್ತು ಅವರ ಕುಟುಂಬ ತಪ್ಪು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇದೇ ಪ್ರಕರಣದಲ್ಲಿ ಜಿಲ್ಲಾಧಿಕಾರಿ, ತಹಶೀಲ್ದಾರ್, ಉಪ ನೋಂದಣಾಧಿಕಾರಿ ಮತ್ತು ಮುಡಾ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪೊಲೀಸರೊಂದಿಗೆ ರಾಜ್ಯಪಾಲರು, ರಾಜ್ಯ ಮುಖ್ಯ ಕಾರ್ಯದರ್ಶಿ ಮತ್ತು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆಯಲಾಗಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ಪಡೆಯುವ ಮೂಲಕ ಮುಡಾ ವಂಚನೆ ಮಾಡಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಸ್ನೇಹಮಯಿ ಕೃಷ್ಣ ತಮ್ಮ ದೂರಿನಲ್ಲಿ ಹಲವಾರು ಪ್ರಶ್ನೆಗಳನ್ನು ಎತ್ತಿದ್ದಾರೆ.
ಬಿಬಿಎಂಪಿ ಚುನಾವಣೆ ಪೂರ್ವ ಸಿದ್ಧತೆ: ಸಮಿತಿ ರಚನೆ, ಮಾಜಿ ಮೇಯರ್ಗಳಿಗೆ ಹೊಣೆ


