BBMP
Loading ...

Hasanamba

ಹಾಸನ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದು ಹಾಸನಾಂಬ ದೇವಿಯ ದೇವಾಲಯವಾಗಿದೆ. ವರ್ಷಕ್ಕೆ ಒಮ್ಮೆ ಮಾತ್ರ ಬಾಗಿಲು ತೆರೆದು ಭಕ್ತರಿಗೆ ದರ್ಶನ ನೀಡುವಂತ ಹಾಸನಾಂಬೆ ತಾಯಿಯ ಬಾಗಿಲು ತೆರೆಯೋದಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.24ರಂದು ಮಧ್ಯಾಹ್ನ 12ಗಂಟೆಗೆ ಹಾಸನಾಂಬ ದೇವಾಲಯದ ಬಾಗಿಲು ತೆರೆಯಲಿದೆ.

ಈ ಬಗ್ಗೆ ಮಾಹಿತಿ ಹಂಚಿಕೊಂಡಂತ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಅವರು, ಹಾಸನಾಂಬ ದೇವಾಲಯವು ಅಕ್ಟೋಬರ್.24ರಂದು ಮಧ್ಯಾಹ್ನ 12 ಗಂಟೆಗೆ ಬಾಗಿಲು ತೆರೆಯಲಿದೆ. ಆದರೇ ಮೊದಲ ದಿನವಾದಂತ ಅಂದು ಭಕ್ತರಿಗೆ ಹಾಸನಾಂಬ ದರ್ಶನಕ್ಕೆ ಅವಕಾಶವಿಲ್ಲ ಎಂದರು.

ಮೊದಲ ಮತ್ತು ಕೊನೆಯ ದಿನದಂದು ಹಾಸನಾಂಬ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶವಿರುವುದಿಲ್ಲ. ಅಕ್ಟೋಬರ್.25ರಿಂದ 11 ದಿನಗಳ ಕಾಲ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ದೇವಿಯ ದರ್ಶನಕ್ಕೆ ಟಿಕೆಟ್ ಖರೀದಿಸಿಯೂ ಭಕ್ತರು ದರ್ಶನ ಮಾಡಬಹುದಾಗಿದೆ. 1000 ಹಾಗೂ 300 ರೂ ಟಿಕೆಟ್ ಖರೀದಿಸಿದವರಿಗೆ ಒಂದೊಂದು ಲಾಡು, ಪ್ರಸಾದವನ್ನು ವಿತರಿಸುವುದಾಗಿ ತಿಳಿಸಿದರು.

ಹಾಸನಾಂಬ ಜಾತ್ರಾ ಮಹೋತ್ಸವಕ್ಕೆ ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಕೆ ಎಸ್ ಆರ್ ಟಿಸಿಯಿಂದ ಟೂರ್ ಪ್ಯಾಕೇಜ್ ಕೂಡ ವ್ಯವಸ್ಥೆ ಮಾಡಲಾಗಿದೆ. ಭಕ್ತರು ಸದುಪಯೋಗ ಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಗಾರರಿಗೆ ಗುಡ್ ನ್ಯೂಸ್ : ಆಸ್ತಿ ನೋಂದಣಿ ಮಸೂದೆಗೆ ರಾಷ್ಟ್ರಪತಿ ಅಂಕಿತ!

Leave a Reply

Your email address will not be published. Required fields are marked *