ಬೆಂಗಳೂರು: ಇದೇ ಗುರುವಾರ (ಜೂನ್ 26) ಬೆಳಗ್ಗೆ 8.30ಕ್ಕೆ ಇಂಧನ ಇಲಾಖೆ ವಿದ್ಯುತ್ ಪರಿವೀಕ್ಷಣಾಲಯದಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಕಾರ್ಯಕ್ರಮ-2025 ನಡೆಯಲಿದೆ.
ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಕಾರ್ಯಕ್ರಮ ಕರ್ನಾಟಕ ರಾಜ್ಯ ಸರ್ಕಾರದ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ ಅವರು ಉದ್ಘಾಟಿಸಲಿದ್ದಾರೆ.
ಕ.ವಿ.ಪ್ರ.ನಿ.ನಿ. ನಿರ್ದೇಶಕರಾದ ಶ್ರೀ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಶಿವ ಶಂಕರ ಎನ್ ಹಾಗೂ ಇಂಧನ ಇಲಾಖೆಯ ಅಪರ ಕಾರ್ಯದರ್ಶಿಗಳಾದ ಶ್ರೀ ಎಸ್.ಬಿ. ಪ್ರಶಾಂತ ಕುಮಾರ ಅವರು ಮುಖ್ಯ ಅತಿಥಿಗಳಾಗಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಕರ್ನಾಟಕ ಸರ್ಕಾರ ಮುಖ್ಯ ವಿದ್ಯುತ್ ಪರಿವೀಕ್ಷಕರಾದ ಶ್ರೀ ಟಿ.ಎನ್. ಅಪ್ಪಚ್ಚು ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. EIEAOK ಅಧ್ಯಕ್ಷರಾದ ಶ್ರೀ ಹೆಚ್.ಎಸ್. ವೆಂಕಟೇಶ ಹಾಗೂ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಸಿ. ರಮೇಶ್ ಅವರನ್ನು ಈ ಸಮಾರಂಭಕ್ಕೆ ವಿಶೇಷವಾಗಿ ಆಹ್ವಾನಿಸಲಾಗಿದೆ.
ರಾಜಾಜಿನಗರದ ಬ್ರಿಗೇಡ್ ಗೇಟ್‌ವೇ (ಒರಾಯನ್ ಮಾಲ್ ಹಿಂಭಾಗ) ನಲ್ಲಿ ಈ ಸಮಾರಂಭ ನಡೆಯಲಿದ್ದು, ಎಲೆಕ್ಟ್ರಿಕಲ್ ಇನ್ಸ್‌ಪೆಕ್ಟೋರೇಟ್ ಇಂಜಿನಿಯರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಎಲ್ಲರಿಗೂ ಆದರದ ಸುಸ್ವಾಗತವನ್ನು ಕೋರಿದೆ.
ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ವ್ಯಾಪಾರಸ್ಥರಿಗೆ ನಷ್ಟ, ಬಿಬಿಎಂಪಿಗೆ ಹಿಡಿಶಾಪ..!
ಬಿಆರ್ ಪಾಟೀಲ್ ಬೆನ್ನಲ್ಲೇ ಸರ್ಕಾರದ ವಿರುದ್ಧ ಸಿಡಿದೆದ್ದ ಮತ್ತೋರ್ವ ಕಾಂಗ್ರೆಸ್ ಶಾಸಕ: ರಾಜೀನಾಮೆಯ ಬೆದರಿಕೆ!


