BBMP
Loading ...

Darshan

ಹುಬ್ಬಳ್ಳಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ವರ್ಷ ಡಿಸೆಂಬರ್ ನಲ್ಲಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ನೀಡಿತ್ತು. ಇದೀಗ ಸುಪ್ರೀಂ ಕೋರ್ಟ್ ನಲ್ಲಿ ಈ ಪ್ರಕರಣದ ಕುರಿತು ವಿಚಾರಣೆ ನಡೆಯುತ್ತಿದ್ದು, ಇದೇ ವಿಚಾರವಾಗಿ ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣದ ಆರೋಪಿ ಫಯಾಜ್ ದರ್ಶನಗೆ ಬೇಲ್ ಕೊಟ್ಟಂತೆ ನನಗೂ ಸಹ ಜಾಮೀನು ನೀಡಿ ಎಂದು ಕೋರ್ಟ್ ಮೊರೆ ಹೋಗಿದ್ದಾನೆ.

ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಇಂದು ಜಾಮೀನು ಅರ್ಜಿಯ ಅಂತಿಮ ಆದೇಶ ಹೊರಬೀಳಲಿದೆ.

ಈ ಬಗ್ಗೆ ನೇಹಾತಂದೆ ಬೇಸರ ವ್ಯಕ್ತಪಡಿಸಿದ್ದಾರೆ. ನಟ ದರ್ಶನ್ ತಮ್ಮ ನಟನೆ, ಒಳ್ಳೆಯ ಕೆಲಸಗಳಿಂದ ಜನರಿಗೆ ಮಾದರಿಯಾಗಬೇಕಿತ್ತು. ಆದರೆ ಕೊಲೆ ಪ್ರಕರಣದಲ್ಲಿ ಇತರೆ ಆರೋಪಿಗಳಿಗೆ ಮಾದರಿಯಾಗಿದ್ದು ನಿಜಕ್ಕೂ ನೋವಿನ ವಿಷಯ. ನನ್ನ ಮಗಳಿಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಕಣ್ಣೀರಿಟ್ಟಿದ್ದಾರೆ.

ಸಾರಿಗೆ ನೌಕರರಿಗೆ ಬಿಗ್ ಶಾಕ್ : ನಾಳೆಯ ಮುಷ್ಕರದಲ್ಲಿ ಭಾಗವಹಿಸುವವರಿಗೆ ಸಂಬಳವೂ ಇಲ್ಲ, ರಜೆಯು ಇಲ್ಲ!

Leave a Reply

Your email address will not be published. Required fields are marked *