Greater Bengaluru news9 : ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಕಾರ್ಯಭಾರ ಆರಂಭಿಸಿದ್ದಾರೆ.
ರಾಜ್ಯ ಸರ್ಕಾರದ ಇತ್ತೀಚಿನ ಆದೇಶದಂತೆ, ಡಾ. ಮನೋಹರ್ ಅವರು ಸದ್ಯ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದರ ಜೊತೆಗೆ ಈಗ ಹೆಚ್ಚುವರಿಯಾಗಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರ ಜವಾಬ್ದಾರಿಯನ್ನೂ ಅವರು ನಿಭಾಯಿಸಲಿದ್ದಾರೆ.
ಇಲ್ಲಿಯವರೆಗೆ ಕೆಪಿಟಿಸಿಎಲ್ ಎಂಡಿ ಆಗಿ ಯಶಸ್ವಿಯಾಗಿ ಕಾರ್ಯನಿರ್ವಹಿಸಿದ್ದ ಶ್ರೀ ಪಂಕಜ್ ಕುಮಾರ್ ಪಾಂಡೆ ಅವರು, ಇಂದು ಡಾ. ಮನೋಹರ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.


