BBMP
Loading ...

Namma Metro

Greater Bengaluru News9 : ಇದೇ ಭಾನುವಾರ (ಏ.5) 2 ಗಂಟೆಗಳ ಕಾಲ `ನಮ್ಮ ಮೆಟ್ರೋ’ (Namma Metro) ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ ಎಂದು ಬಿಎಂಆರ್‌ಸಿಲ್ (BMRCL) ತಿಳಿಸಿದೆ.

ನೇರಳೆ ಮಾರ್ಗದ ವಿಜಯನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿ ನಡೆಯಲಿದೆ. ಹೀಗಾಗಿ ಭಾನುವಾರ (ಏ.5ರಂದು) ಬೆಳಗ್ಗೆ 7 ಗಂಟೆಯಿಂದ 9 ಗಂಟೆವರೆಗೆ ಮೆಜೆಸ್ಟಿಕ್‌ನಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸೇವೆ ತಾತ್ಕಾಲಿಕವಾಗಿ ಸ್ಥಗಿತವಾಗಲಿದೆ. ಇ

ಇದರ ಹೊರತಾಗಿ ಚಲ್ಲಘಟ್ಟದಿಂದ ಮೈಸೂರು ರಸ್ತೆ ಹಾಗೂ ಮೆಜೆಸ್ಟಿಕ್‌ನಿಂದ ವೈಟ್‌ಫೀಲ್ಡ್ವರೆಗೆ, ಹಸಿರು ಮಾರ್ಗದಲ್ಲಿ ಮಾದಾವರದಿಂದ ರೇಷ್ಮೆ ಸಂಸ್ಥೆವರೆಗೆ ಮತ್ತು ಹಳದಿ ಮಾರ್ಗದಲ್ಲಿ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರದವರೆಗೆ ವೇಳಾಪಟ್ಟಿಯಂತೆ ನಮ್ಮ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಯಿಂದ ಆರಂಭವಾಗಲಿದೆ.

ಇನ್ನೂ ಭಾನುವಾರ 9 ಗಂಟೆ ಬಳಿಕ ಮೆಜೆಸ್ಟಿಕ್‌ದಿಂದ ಮೈಸೂರು ರಸ್ತೆವರೆಗೆ ಮೆಟ್ರೋ ಸಂಚಾರ ಆರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *