BBMP
Loading ...

Kempegowda Jayanti

ಬೆಂಗಳೂರು: ಇದೇ ಭಾನುವಾರ (ಜೂನ್​ 29) ನಾಗರಬಾವಿಯ ಅನ್ನಪೂರ್ಣೇಶ್ವರಿ ನಗರ ಸರ್ಕಲ್​ನಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟ ಕನ್ನಡಿಗರ ಧ್ವನಿ ಸಂಘದಿಂದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯೋತ್ಸವ ಅದ್ಧೂರಿಯಾಗಿ ನೆರವೇರಲಿದೆ.

ಭಾನುವಾರ ಬೆಳಗ್ಗೆ 10.30ಕ್ಕೆ ವಿವಿಧ ಬಗೆಯ ಸಾಂಸ್ಕೃತಿಕ ಕಲಾತಂಡಗಳೊಂದಿಗೆ ಅದ್ದೂರಿಯಾಗಿ ನಾಡಪ್ರಭು ಶ್ರೀ ಕೆಂಪೇಗೌಡರ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ. ಇದಾದ ನ೦ತರ ಉಚಿತ ಆರೋಗ್ಯ ತಪಾಸಣಾ ಶಿಬಿರ, ಸ್ವಯಂಪ್ರೇರಿತ ರಕ್ತದಾನ ಶಿಬಿರ, ಉಚಿತ ಕಣ್ಣಿನ ತಪಾಸಣೆ ಇನ್ನಿತರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಈ ಸಮಾರಂಭಕ್ಕೆ ಸ್ಪಟಿಕಪುರಿ ಮಹಾಸಂಸ್ಥಾನ ಮಠದ ಶ್ರೀ ಶ್ರೀ ಶ್ರೀ ನಂಜಾವಧೂತ ಮಹಾಸ್ವಾಮಿಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಲ್ಲದೆ, ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್​ ಗುತ್ತಿಗೆದಾರರ ಸಂಘದ ಹೋರಾಟ ಸಮಿತಿ ಚೇರ್ಮನ್​ ಹಾಗೂ ಬಿಬಿಬಿಎಂಪಿ ನ್ಯೂಸ್​ 9 ಸಂಪಾದಕರಾದ ಶ್ರೀ ವೈ. ಹೆಚ್​. ಆನಂದ್​ ಅವರು ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.

ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕನ್ನಡಿಗರ ಧ್ವನಿ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷ ಅನಿಲ್​ ಕುಮಾರ್​, ರಾಜ್ಯ ಗೌರವಾಧ್ಯಕ್ಷ ಹೆಚ್​. ಟಿ. ಶಿವರಾಜ್​ ಗೌಡ್ರು ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷರಾದ ಧನಂಜಯ್​ ಮನವಿ ಮಾಡಿದ್ದಾರೆ.

ಜೂನ್​ 26ರಂದು ಇಂಧನ ಇಲಾಖೆ ವಿದ್ಯುತ್‌ ಪರಿವೀಕ್ಷಣಾಲಯದಿಂದ ರಾಷ್ಟ್ರೀಯ ವಿದ್ಯುತ್ ಸುರಕ್ಷತಾ ಕಾರ್ಯಕ್ರಮ

Leave a Reply

Your email address will not be published. Required fields are marked *