BBMP
Loading ...

Lok Adalat new

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ಆದೇಶದ ಮೇರೆಗೆ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಡಿಸೆಂಬರ್ 14, 2024 ರಂದು ಬೆಳಿಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ರಾಷ್ಟ್ರೀಯ ಲೋಕ ಆದಾಲತ್ ಆಯೋಜಿಸಲಾಗುವುದು.

ಲೋಕ ಅದಾಲತ್‍ದಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಸಿವಿಲ್ ವ್ಯಾಜ್ಯ, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸೂಲಾತಿ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳು, ಜೀವನಾಂಶ, ವೈವಾಹಿಕ ಪ್ರಕರಣಗಳು (ವಿವಾಹ ವಿಚ್ಛೇದನ ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ ಪ್ರಕರಣಗಳು, ವಿದ್ಯುಚ್ಛಕ್ತಿ ಮತ್ತು ನೀರಿನ ಶುಲ್ಕ ಪಾವತಿ ಪ್ರಕರಣಗಳು, ಸಾರ್ವಜನಿಕ ಸೇವೆ ಮತ್ತು ನಿವೃತ್ತಿ ವೇತನಗಳಿಗೆ ಸಂಬಂಧಿಸಿದ ಪ್ರಕರಣಗಳು, ಕಂದಾಯ ಮತ್ತು ಅದಕ್ಕೆ ಸಂಬಂಧಿಸಿದ ಪ್ರಕರಣಗಳು, ಕಾನೂನಿನಲ್ಲಿ ರಾಜಿ ಆಗಬಹುದಾದ ಎಲ್ಲಾ ತರಹದ ಕ್ರಿಮಿನಲ್ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಸಿವಿಲ್ ವ್ಯಾಜ್ಯಗಳಲ್ಲಿ ಪಕ್ಷಗಾರರು ಲೋಕ್-ಅದಾಲತ್‍ನಲ್ಲಿ ರಾಜಿಯಾದರೆ ಪಕ್ಷಗಾರರು ಸರ್ಕಾರಕ್ಕೆ ಪಾವತಿಸಿರುವ ನ್ಯಾಯಾಲಯದ ಶುಲ್ಕವನ್ನು ವಾಪಸ್ಸು ಕೊಡಲು ಅವಕಾಶವಿದೆ. ಲೋಕ್‍ಅದಾಲತ್‍ನಲ್ಲಿ ಉಭಯ ಪಕ್ಷಗಾರರು ಪರಸ್ಪರ ಒಪ್ಪಿದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು.

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾಗಿರುವ ನ್ಯಾಯಮೂರ್ತಿಗಳ ಆಶಯದಂತೆ ಲೋಕ್‍ಅದಾಲತ್ ಮುಖಾಂತರ ಪ್ರಕರಣಗಳನ್ನು ಇತ್ಯರ್ಥಪಡಿಸಲು, ಸಾರ್ವಜನಿಕರು ವಿಶೇಷವಾಗಿ ಕಕ್ಷಿದಾರರು ಹೆಚ್ಚಿನ ಸಂಖ್ಯೆಯಲ್ಲಿ ಲೋಕ ಅದಾಲತ್‍ನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪರಶುರಾಮ ಎಫ್. ದೊಡ್ಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಒಟಿಎಸ್ ಆಸ್ತಿ ತೆರಿಗೆ ಪಾವತಿ ಇಂದೇ ಕೊನೆ ದಿನ: ಡಿ 1ರಿಂದ ದುಪ್ಪಟ್ಟು ದಂಡ ವಸೂಲಿ ಎಚ್ಚರಿಕೆ

Leave a Reply

Your email address will not be published. Required fields are marked *