BBMP
Loading ...

Minor Bike

ತುಮಕೂರು : ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಕೊಡುವ ಪೋಷಕರೇ ಎಚ್ಚರ,ಅಪ್ರಾಪ್ತ ಮಗನಿಗೆ ವಾಹನವನ್ನು ಚಲಾಯಿಸಲು ನೀಡಿದ್ದಕ್ಕೆ ತಂದೆಗೆ ತುಮಕೂರು ಜಿಲ್ಲೆಯ ಗುಬ್ಬಿ ಜೆಎಂಎಫ್ಸಿ ನ್ಯಾಯಾಲಯ 30000 ರೂ. ದಂಡ ಹಾಗೂ ಒಂದು ದಿನ ಜೈಲು ಶಿಕ್ಷೆ ವಿಧಿಸಿದೆ.

ಹೌದು, ಕಳೆದ ವರ್ಷ ಅಕ್ಟೋಬರ್ 31 ರಂದು ಅಪ್ರಾಪ್ತ ಮಗನಿಗೆ ತಂದೆ ಬೈಕ್ ನೀಡಿದ್ದರು. ಆತ ತುಮಕೂರಿನಿಂದ ಚಾಲನೆ ಮಾಡಿಕೊಂಡು ಬರುವಾಗ ರಾತ್ರಿ ಗುಬ್ಬಿಬೈಪಾಸ್ನ ಸಿಐಟಿ ಕಾಲೇಜು ಹಿಂಭಾಗ ರಸ್ತೆ ಪಕ್ಕದಲ್ಲಿದ್ದ ಮಣ್ಣಿನ ಗುಡ್ಡೆಗೆ ಡಿಕ್ಕಿ ಹೊಡೆದಿದ್ದ. ಈ ಸಂಬಂಧ ಗುಬ್ಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು. ಈ ಸಂಬಂಧ ನ್ಯಾಯಾಲಯ ಅಪ್ರಾಪ್ತ ಮಗನಿಗೆ ಬೈಕ್ ಕೊಟ್ಟ ತಂದೆಗೆ 1 ದಿನ ಜೈಲು ಶಿಕ್ಷೆ ಮತ್ತು 30000 ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯರಿಂದ ಅಪಮಾನ; ಸ್ವಯಂನಿವೃತ್ತಿಗೆ ಮುಂದಾದ ಎಎಸ್​ಪಿ!

Leave a Reply

Your email address will not be published. Required fields are marked *