BBMP
Loading ...

KSRTC

ಬೆಂಗಳೂರು : ಹೊಸ ವರ್ಷದ ಸಂಭ್ರಮಾಚರಣೆಯಲ್ಲಿರುವ ರಾಜ್ಯದ ಜನತೆಗೆ ಇದೀಗ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಲು ಮುಂದಾಗಿದೆ. ಸಂಕ್ರಾಂತಿ ಬಳಿಕ ಕೆಎಸ್​ಆರ್​ಟಿಸಿ ಬಸ್ ಟಿಕೆಟ್ ದರ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹೌದು ಈ ಕುರಿತಂತೆ ಈಗಾಗಲೇ ಈ ಹಿಂದೆ ಶೇ. 25 ರಷ್ಟು ಟಿಕೆಟ್ ದರ ಏರಿಕೆಗೆ ಎಲ್ಲಾ ಸಾರಿಗೆ ನಿಗಮಗಳು ಮನವಿ ಮಾಡಿದ್ದವು. ಶೇ.25 ರಷ್ಟು ಅಲ್ಲದಿದ್ದರೂ, ಅದರ ಅರ್ಧದಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.ಸಂಕ್ರಾಂತಿ ನಂತರ ಟಿಕೆಟ್ ದರದ ಬಗ್ಗೆ ಸರ್ಕಾರ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸಿಎಂ ಜೊತೆ ಸಾರಿಗೆ ನೌಕರರ ಸಂಘಟನೆಗಳ ಸಭೆಯಲ್ಲಿ ಪ್ರಸ್ತಾಪವಾಗಬಹುದು ಎನ್ನಲಾಗಿದೆ.

ಪೆಟ್ರೋಲ್-ಡೀಸೆಲ್ ದರ ಹಾಗೂ ಬಿಡಿ ಭಾಗಗಳ ದರ ಏರಿಕೆಯಾಗಿದೆ. ಅದರೆ, ಕಳೆದ ನಾಲ್ಕೈದು ವರ್ಷದಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಇಂಧನ ದರ ನಾಲ್ಕೈದು ವರ್ಷದಲ್ಲಿ ಏರಿಕೆಯಾಗುತ್ತಲೇ ಬಂದಿದೆ. ಅದಕ್ಕೆ ಅನುಗುಣವಾಗಿ ಟಿಕೆಟ್ ದರ ಏರಿಕೆಗೆ ನಾಲ್ಕೂ ನಿಗಮಗಳು ಮನವಿ ಮಾಡಿದ್ದವು. ಹಾಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸಾರಿಗೆ ನೌಕರರ ಸಂಘಟನೆಗಳ ಸಭೆಯಲ್ಲಿ ಪ್ರಸ್ತಾಪಿಸಿ ಸಂಕ್ರಾಂತಿ ಬಳಿಕ ಕೆಎಸ್ಆರ್ಟಿಸಿ ಬಸ್ ದರ ಏರಿಕೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಗುತ್ತಿಗೆದಾರನಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಬಿದ್ದ ಇಬ್ಬರು ಅಧಿಕಾರಿಗಳು

Leave a Reply

Your email address will not be published. Required fields are marked *