BBMP
Loading ...

images (1)

Greater Bengaluru news9 : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದಲ್ಲಿ ಬೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯ ಅತಿರೇಕಕ್ಕೆ ತಲುಪಿದೆ. ಭೂಗತ ಕೇಬಲ್ ಅಳವಡಿಕೆ ಹೆಸರಿನಲ್ಲಿ ಪಟ್ಟಣದ ಹೃದಯ ಭಾಗದಲ್ಲಿ ತೆಗೆದಿರುವ ಗುಂಡಿಗಳನ್ನು ಮುಚ್ಚದೆ ಹಾಗೆಯೇ ಬಿಡಲಾಗಿದ್ದು, ಪಾದಚಾರಿಗಳು ಹಾಗೂ ವಾಹನ ಸವಾರರು ಪ್ರತಿನಿತ್ಯ ಅಪಘಾತಕ್ಕೀಡಾಗುತ್ತಿದ್ದಾರೆ.

ಪಟ್ಟಣದ ಬಸ್ ನಿಲ್ದಾಣ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ಒಂದು ಟ್ರಾನ್ಸ್‌ಫಾರ್ಮರ್‌ನಿಂದ ಮತ್ತೊಂದಕ್ಕೆ ಕೇಬಲ್ ಅಳವಡಿಸಲು ನಾಲ್ಕೈದು ಅಡಿ ಆಳದ ಗುಂಡಿಗಳನ್ನು ತೋಡಲಾಗಿದೆ. ಕೆಲಸ ಮುಗಿದರೂ ಗುಂಡಿಗಳನ್ನು ಮುಚ್ಚದೆ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದಾರೆ. ಕಳೆದ ಎರಡು ಮೂರು ವಾರಗಳಿಂದ ಈ ಗುಂಡಿಗಳು ತೆರೆದ ಸ್ಥಿತಿಯಲ್ಲೇ ಇವೆ. ಯಾವುದೇ ಮುನ್ನೆಚ್ಚರಿಕಾ ಕ್ರಮಗಳನ್ನಾಗಲಿ ಅಥವಾ ಬ್ಯಾರಿಕೇಡ್‌ಗಳನ್ನಾಗಲಿ ಹಾಕದೆ ನಿರ್ಲಕ್ಷ್ಯ ತೋರಲಾಗಿದೆ. ರಾತ್ರಿ ವೇಳೆ ಹಾಗೂ ಜನನಿಬಿಡ ಸಮಯದಲ್ಲಿ ಗುಂಡಿಗಳು ಕಾಣದೆ ಅನೇಕ ಮಹಿಳೆಯರು ಮತ್ತು ಮಕ್ಕಳು ಬಿದ್ದು ಕೈಕಾಲು ಮುರಿದುಕೊಂಡಿದ್ದಾರೆ.

ಸ್ಥಳೀಯರು ಹತ್ತಾರು ಬಾರಿ ದೂರು ನೀಡಿದರೂ ಬೆಸ್ಕಾಂ ಸಿಬ್ಬಂದಿ ಮಾತ್ರ ಎಚ್ಚೆತ್ತುಕೊಂಡಿಲ್ಲ. ಯಾವುದಾದರೂ ದೊಡ್ಡ ಅನಾಹುತ ಸಂಭವಿಸುವವರೆಗೆ ಅಧಿಕಾರಿಗಳು ಕಾಯುತ್ತಿದ್ದಾರೆಯೇ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ. ಕೂಡಲೇ ಈ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಪಟ್ಟಣದ ನಿವಾಸಿಗಳು ಒತ್ತಾಯಿಸಿದ್ದಾರೆ.

Leave a Reply

Your email address will not be published. Required fields are marked *