BBMP
Loading ...

GBA (1)

Greater Bengaluru news9 : ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿಂದು ಬೆಂಗಳೂರಿನಲ್ಲಿ ಜಿಬಿಎ ಮೊದಲ ಸಭೆ ನಡೀತು. ಜಿಬಿಎ (GBA) ಅಡಿಯಲ್ಲಿರುವ 5 ನಗರ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳು ಜಿಬಿಎ ವ್ಯಾಪ್ತಿಯ ನಗರ ಪಾಲಿಕೆಗಳ ಚುನಾವಣೆ ಸಂಬಂಧಿಸಿದಂತೆ ಸಭೆ ಮಾಡಲಾಯಿತು. ಸಭೆಯಲ್ಲಿ ಬೆಂಗಳೂರಿನ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯಗಳು ಹಾಗೂ ಕುಂದುಕೊರತೆಗಳ ಬಗ್ಗೆಯೂ ಚರ್ಚೆ ನಡೀತು.

ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಬೆಂಗಳೂರು ನಗರ ಕಾಂಗ್ರೆಸ್ ಶಾಸಕರು, ಜಿಬಿಎ ಪಾಲಿಕೆಗಳ ಆಯುಕ್ತರು, ಸದಸ್ಯರು ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನ ಕೈಗೊಳ್ಳಲಾಯಿತು.

ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (BDA)ಕ್ಕೆ ಇದ್ದ ಇದ್ದ ನಕ್ಷೆ ಮಂಜೂರಾತಿ ಹಾಗೂ TDR (ವರ್ಗಾಯಿಸಬಹುದಾದ ಅಭಿವೃದ್ಧಿ ಹಕ್ಕುಗಳು) ನೀಡುವ ಅಧಿಕಾರವನ್ನ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಗೆ ತರಲು ನಿರ್ಧರಿಸಲಾಯಿತು. ಜಿಬಿಎ ವ್ಯಾಪ್ತಿಯ 5 ನಗರಪಾಲಿಕೆಗಳಿಗೆ ಬಜೆಟ್‌ ತೀರ್ಮಾನ ಮಾಡುವ ಜೊತೆಗೆ ಬಿಎಂಟಿಸಿ ಹಾಗೂ ಅಗ್ನಿಶಾಮಕ ದಳವನ್ನೂ ಸಹ ಬಿಜೆಪಿ ವ್ಯಾಪ್ತಿಗೆ ಸೇರಿಸಿ ನಿರ್ಣಯ ಕೈಗೊಳ್ಳಲಾಯಿತು.

ಬಿಜೆಎ ಸಭೆಗೆ ಬಿಜೆಪಿ ಶಾಸಕರ ಗೈರು
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮೊದಲ ಸಭೆಗೆ ಬಿಜೆಪಿ ಶಾಸಕರು ಗೈರಾದರು. ಜಿಬಿಎ ರಚನೆ ಬಗ್ಗೆ ನಮಗೆ ವಿರೋಧವಿದೆ ಹಾಗಾಗಿ ನಾವು ಸಭೆಗೆ ಹಾಜರಾಗುವುದಿಲ್ಲ ಎಂದು ವಿರೋಧಿಸಿದ್ರು. 75 ಜಿಬಿಎ ಸದಸ್ಯರ ಪೈಕಿ ಕೇವಲ 35 ಸದಸ್ಯರು ಮಾತ್ರ ಸಭೆಗೆ ಹಾಜರಾಗಿದ್ದರು. ಹೀಗಾಗಿ ಮೊದಲ ಸಭೆಯಲ್ಲಿ ಸಿಎಂಗೆ ಹಿನ್ನಡೆಯಾಯ್ತು.

Leave a Reply

Your email address will not be published. Required fields are marked *