ಬೆಂಗಳೂರು: ವಿಜಯನಗರದ ಆದಿಚುಂಚನಗಿರಿ ಶಾಖಾ ಮಠದ ಗಂಗಾಧರೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಪ್ರಸನ್ನ ವೀರಾಂಜನೇಯಸ್ವಾಮಿ ಮೂರ್ತಿಯನ್ನು ಶ್ರೀ ಮಠದ ನಂದಿನಿ ಬಡಾವಣೆಯ ಶಾಖಾ ಮಠದ ಮೂಲ ದೇವಾಲಯದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು.
ವೀರಾಂಜನೇಯಸ್ವಾಮಿ ಮೂರ್ತಿಯನ್ನು ಸಾಂಸ್ಕೃತಿಕ ಮೆರವಣಿಗೆಯ ಮೂಲಕ ಕೊಂಡೊಯ್ದು ನಂದಿನಿ ಬಡಾವಣೆಯ ಶಾಖಾ ಮಠದ ಮೂಲ ದೇವಾಲಯದಲ್ಲಿ ಪ್ರತಿಷ್ಠಾಪನೆಯನ್ನು ಮಾಡಲಾಯಿತು.
ಈ ವಿಶೇಷ ಕಾರ್ಯಕ್ರಮ ವೇಳೆ ಶ್ರೀ ಶ್ರೀ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು, ಶಾಖಾ ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ಶ್ರೀ ಸೌಮ್ಯನಾಥ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ಗೋವಿಂದರಾಜನಗರದ ಕಾಂಗ್ರೆಸ್ ಶಾಸಕ ಪ್ರಿಯಕೃಷ್ಣ ಅವರು ಮೆರವಣಿಗೆಯಲ್ಲಿ ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.
ಸಾಂಸ್ಕೃತಿಕ ಮೆರವಣಿಗೆಯ ಮೂಲಕ ಶ್ರೀ ಮಠದ ನಂದಿನಿ ಬಡಾವಣೆಯ ಶಾಖಾ ಮಠದ ಮೂಲ ದೇವಾಲಯದಲ್ಲಿ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರು ಭಗವಂತನ ಕೃಪೆಗೆ ಪಾತ್ರರಾದರು.
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿಯ ಹಂತಕನ ಎನ್ಕೌಂಟರ್: ಪಿಎಸ್ಐ ಅನ್ನಪೂರ್ಣ ಕಾರ್ಯಕ್ಕೆ ಜನರಿಂದ ಭಾರೀ ಮೆಚ್ಚುಗೆ!


