BBMP
Loading ...

Police Bribe

ಬೆಂಗಳೂರು: ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಲಂಚ ಪಡೆದಿರುವ ಆರೋಪದಲ್ಲಿ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಯ ಪಿಎಸ್‌ಐ ಬಸವರಾಜ್‌ ಹಾಗೂ ಕಾನ್‌ಸ್ಟೆàಬಲ್‌ವೊಬ್ಬರನ್ನು ಅಮಾನತುಗೊಳಿಸ ಲಾಗಿದೆ.

ಎಚ್‌ಎಸ್‌ಆರ್‌ ಲೇಔಟ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಠಾಣೆಯ ಪಿಎಸ್‌ಐ ಬಸವರಾಜ್‌ ಹಾಗೂ ಕಾನ್‌ಸ್ಟೇಬಲ್‌ ಲ್ಯಾಪ್‌ಟಾಪ್‌ ಹಾಗೂ 1 ಲಕ್ಷ ರೂ. ಪಡೆದುಕೊಂಡಿರುವ ಆರೋಪ ಕೇಳಿ ಬಂದಿತ್ತು.

ಈ ಬಗ್ಗೆ ಆಗ್ನೇಯ ವಿಭಾಗದ ಡಿಸಿಪಿ ಸಾರಾ ಫಾತಿಮಾ ಅವರು ತನಿಖೆ ನಡೆಸಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಅವರಿಗೆ ವರದಿ ಸಲ್ಲಿಸಿದ್ದರು. ಪ್ರಕರಣವು ಸಾಬೀತಾದ ಹಿನ್ನೆಲೆಯಲ್ಲಿ ದಯಾನಂದ ಅವರು ಇಬ್ಬರನ್ನೂ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಚೆಸ್ಕಾಂಗೆ ಪ್ರಭಾರ ಎಂಡಿಯಾಗಿ ಕೆ.ಎಂ ಮುನಿಗೋಪಾಲರಾಜು ನೇಮಕ

Leave a Reply

Your email address will not be published. Required fields are marked *