BBMP
Loading ...

Metro

Greater Bengaluru News9 : ರಾಜಧಾನಿಯ ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ ಈ ಭಾನುವಾರ ಬೆಳಿಗ್ಗೆ ರೈಲು ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದೆ. ಸುರಕ್ಷತೆ ಮತ್ತು ಅಗತ್ಯ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ಮಾಹಿತಿ ನೀಡಿದೆ.

ನೇರಳೆ ಮಾರ್ಗದ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಅಗತ್ಯ ತಾಂತ್ರಿಕ ನಿರ್ವಹಣಾ ಕಾಮಗಾರಿಗಳು ನಡೆಯಲಿವೆ. ಈ ಕಾರಣದಿಂದಾಗಿ ಅಂದು ಬೆಳಿಗ್ಗೆ 7 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೆ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಮೆಜೆಸ್ಟಿಕ್ ಹತ್ತಿರದ ಕೆಎಸ್‌ಆರ್) ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ.

ಬೆಳಿಗ್ಗೆ 7 ರಿಂದ 9 ಗಂಟೆಯ ಈ ನಿರ್ಬಂಧಿತ ಅವಧಿಯಲ್ಲೂ ಸಹ, ಉಳಿದ ಟರ್ಮಿನಲ್ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ. ನೇರಳೆ ನೇರಳೆ ಮಾರ್ಗದ ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ ಮಾತ್ರ ರೈಲುಗಳು ಲಭ್ಯವಿರುತ್ತವೆ. ಇನ್ನೊಂದು ಕಡೆ ಕೆಂಪೇಗೌಡ ನಿಲ್ದಾಣನಿಂದ (ಮೆಜೆಸ್ಟಿಕ್) ವೈಟ್‌ಫೀಲ್ಡ್‌ವರೆಗೆ (ಕಾಡುಗೋಡಿ) ಎಂದಿನಂತೆ ಸಂಚಾರ ಇರಲಿದೆ.

ಹಸಿರು ಮಾರ್ಗ ಇರುವ ಮಾದಾವರದಿಂದ ಸಿಲ್ಕ್ ಇನ್‌ಸ್ಟಿಟ್ಯೂಟ್ ವರೆಗೆ ಯಾವುದೇ ಅಡ್ಡಿಯಿಲ್ಲದೆ ರೈಲುಗಳು ಓಡಲಿವೆ. ಹಳದಿ ಮಾರ್ಗ ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಂಚಾರ ಸಾಮಾನ್ಯವಾಗಿರುತ್ತದೆ.

Leave a Reply

Your email address will not be published. Required fields are marked *