Greater Bengaluru News9: ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಧ್ಯಕ್ಷರಾಗಿ ಜೆಡಿಎಸ್ ನಾಯಕ ಆರ್ ಪ್ರಕಾಶ್ ಅವರು ಆಯ್ಕೆಯಾಗಿದ್ದಾರೆ.
ಪ್ರಕಾಶವರು ಇಂದು ಕಚೇರಿಯ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಪದಾಧಿಕಾರಿಗಳು ಹಾಗೂ ಸ್ನೇಹಿತರು, ಒಕ್ಕಲಿಗರ ಸಮುದಾಯದ ಮುಖಂಡರು ಮತ್ತು ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.
ರಾಜ್ಯ ಒಕ್ಕಲಿಗರ ಸಂಘದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಅಧ್ಯಕ್ಷರಾಗಿ ಆಯ್ಕೆಯಾದ ಆರ್ ಪ್ರಕಾಶ್ ಅವರಿಗೆ ಬಿಬಿಎಂಪಿ ನ್ಯೂಸ್ 9 ವತಿಯಿಂದ ಹಾಗೂ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಹೋರಾಟ ಸಮಿತಿಯ ಚೇರ್ಮನ್ ವೈ ಎಚ್ ಆನಂದ್ ಅವರಿಂದ ಅಭಿನಂದನೆಗಳು.





