ದೆಹಲಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತ ಪೂರ್ವ ಯಶಸ್ಸಿನ ಬಳಿಕ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ತನ್ನ ಕಂಟ್ರೋಲ್ಗೆ ತೆಗೆದುಕೊಂಡಿತ್ತು ಅಂತ ಆರೋಪಿಸಿದ್ರು. ನಮ್ಮ ಬ್ಯಾಂಕ್ ಅಕೌಂಟ್ ಸೇರಿದಂತೆ ಎಲ್ಲವನ್ನೂ ಕೇಂದ್ರ ಸರ್ಕಾರ ಬ್ಲಾಕ್ ಮಾಡಿತು. ಆದರೂ ಜನರು ಸಂವಿಧಾನ ರಕ್ಷಣೆಗಾಗಿ ನಮಗೆ ಗೆಲುವನ್ನು ನೀಡಿದ್ದಾರೆ ಅಂತ ರಾಹುಲ್ ಗಾಂಧಿ ಪ್ರತಿಕ್ರಿಯೆ ನೀಡಿದ್ರು.
ಸುದ್ದಿಗೋಷ್ಠಿಯುದ್ದಕ್ಕೂ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ರು. ಮೋದಿ ಮತ್ತು ಅಮಿಲ್ ಶಾ ಇಬ್ಬರೂ ಸೇರಿ ಭಾರತದ ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಅಂತ ಆರೋಪಿಸಿದ್ರು.
ನಾವು ಈ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮಾತ್ರವಲ್ಲದೆ ಸರ್ಕಾರಿ ಸಂಸ್ಥೆಗಳು, ದೇಶದ ಆಡಳಿತ ರಚನೆ, ಗುಪ್ತಚರ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಐ, ನ್ಯಾಯಾಂಗಗಳ ವಿರುದ್ಧ ಹೋರಾಡಿದ್ದೇವೆ ಅಂತ ರಾಹುಲ್ ಗಾಂಧಿ ಹೇಳಿದ್ರು. ಈ ಎಲ್ಲಾ ಸಂಸ್ಥೆಗಳನ್ನು ಅಮಿತ್ ಶಾ ಮತ್ತು ನರೇಂದ್ರ ಮೋದಿ ವಶಪಡಿಸಿಕೊಂಡಿದ್ದಾರೆ. ನಮ್ಮ ಬ್ಯಾಂಕ್ ಅಕೌಂಟ್ಗಳನ್ನೂ ಕೂಡ ಬ್ಲಾಕ್ ಮಾಡಲಾಯ್ತು ಅಂತ ಆರೋಪಿಸಿದ್ರು.


